ಬಿಸಿಸಿಐ ಅಧ್ಯಕ್ಷ- ಕಾರ್ಯದರ್ಶಿಯಾಗಿ ಸೌರವ್ ಗಂಗೂಲಿ, ಜಯ್ ಶಾ ಮುಂದುವರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಸಿಸಿಐ ಪದಾಧಿಕಾರಿಗಳಿಗೆ ಕೂಲಿಂಗ್-ಆಫ್ ಅವಧಿಗೆ ಸಂಬಂಧಿಸಿದ ತನ್ನ ಸಂವಿಧಾನವನ್ನ ತಿದ್ದುಪಡಿ ಮಾಡಲು ಬಿಸಿಸಿಐಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದ್ದು, ಈ ಮೂಲಕ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಮಾರ್ಗ ಸುಗಮವಾಗಿದೆ.
ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಬಿಸಿಸಿಐನಲ್ಲಿ ಸತತ ಎರಡು ಅವಧಿಗಳ ನಂತರ ಕೂಲಿಂಗ್-ಆಫ್ ಅವಧಿ ಅನ್ವಯಿಸುತ್ತದೆ ಎಂದು ಹೇಳಿದೆ.
ಇದರಿಂದ ಸೌರವ್ ಗಂಗೂಲಿ ಮತ್ತು ಜಯ್ ಶಾ ಅವರು ಆಯಾ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗಳಲ್ಲಿ ಆರು ವರ್ಷಗಳನ್ನ ಪೂರೈಸಿದ ಹೊರತಾಗಿಯೂ ಕ್ರಮವಾಗಿ ಬಿಸಿಸಿಐ ಅಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿ ಮುಂದುವರಿಯಲು ಅನುವು ಮಾಡಿಕೊಡುತ್ತದೆ.
ಗಂಗೂಲಿ ಬಂಗಾಳ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ಪದಾಧಿಕಾರಿಯಾಗಿದ್ದರೆ, ಶಾ ಗುಜರಾತ್ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ಸೇವೆ ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!