ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ?: ರಹಸ್ಯ ಟ್ವೀಟ್ ವೈರಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿ ಹರಡಿದೆ. ಈ ಕುರಿತು ಅವರು ಮಾಡಿದ ಟ್ವೀಟ್ ಸುಳಿವು ನೀಡುತ್ತಿದೆ.
30 ವರ್ಷ ಕ್ರಿಕೆಟ್ ಬದುಕು ಪೂರೈಸಿದ ಹಿನ್ನೆಲೆಯಲ್ಲಿ ಸೌರವ್ ಗಂಗುಲಿ ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಇದರ ಜೊತೆಗೆ ಅವರು ರಾಜಕೀಯ ಸೇರುವ ಕುರಿತಂತೆ ಪುಷ್ಟಿ ನೀಡುವಂತಿದೆ. ಇತ್ತೀಚೆಗಷ್ಟೇ ಗಂಗೂಲಿ ನಿವಾಸಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಗಂಗೂಲಿ ಬಿಜೆಪಿ ಸೇರಬಹುದೆಂದು ಹೇಳಲಾಗಿದೆ.

ಟ್ವಿಟ್ ಏನು?
‘1992 ರಲ್ಲಿ ಕ್ರಿಕೆಟ್‌ನೊಂದಿಗೆ ನನ್ನ ಪ್ರಯಾಣದ ಪ್ರಾರಂಭದಿಂದ 2022 30 ನೇ ವರ್ಷವನ್ನು ಸೂಚಿಸುತ್ತದೆ. ಅಂದಿನಿಂದ, ಕ್ರಿಕೆಟ್ ನನಗೆ ಬಹಳಷ್ಟು ನೀಡಿದೆ. ಎಲ್ಲಕ್ಕಿಂತ ಮುಖ್ಯವಾಗಿ, ಇದು ನನಗೆ ನಿಮ್ಮೆಲ್ಲರ ಬೆಂಬಲವನ್ನು ನೀಡಿದೆ. ಪ್ರಯಾಣದ ಭಾಗವಾಗಿರುವ, ನನ್ನನ್ನು ಬೆಂಬಲಿಸಿದ ಮತ್ತು ನಾನು ಇಂದು ಇರುವ ಸ್ಥಿತಿಯನ್ನು ತಲುಪಲು ಸಹಾಯ ಮಾಡಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇಂದು, ನಾನು ಏನನ್ನಾದರೂ ಪ್ರಾರಂಭಿಸಲು ಯೋಜಿಸುತ್ತಿದ್ದೇನೆ, ಅದು ಬಹುಶಃ ಬಹಳಷ್ಟು ಜನರಿಗೆ ಸಹಾಯ ಮಾಡುತ್ತದೆ. ನಾನು ನನ್ನ ಜೀವನದ ಈ ಅಧ್ಯಾಯವನ್ನು ಪ್ರವೇಶಿಸುವಾಗ ನಿಮ್ಮ ಬೆಂಬಲವನ್ನು ನೀವು ಮುಂದುವರಿಸುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂದು ಗಂಗೂಲಿ ಟ್ವಿಟರ್‌ನಲ್ಲಿ ಹೇಳಿದ್ದಾರೆ.
ಈ ಮೂಲಕ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ಎಂಟ್ರಿ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!