ಸೌರವ್ ಗಂಗೂಲಿ ರಾಜೀನಾಮೆ?: ಜಯ್ ಶಾ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಿಸಿಸಿಐ (BCCI) ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡಿಲ್ಲ ಎಂಬುದನ್ನು ಮಂಡಳಿಯ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿದ್ದಾರೆ.
ಸೌರವ್ ಗಂಗೂಲಿ ಅವರ ಟ್ವಿಟರ್ ಪೋಸ್ಟ್ ನಂತರ, ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನವನ್ನು ತೊರೆದಿದ್ದಾರೆ ಎಂಬ ಸುದ್ದಿ ಹರಡಿತು. ಇದರ ಜೊತೆಗೆ ಗಂಗೂಲಿ ಅವರು ರಾಜ್ಯಸಭೆಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಿದಾಡಲಾರಂಭಿಸಿತ್ತು. ಇದೀಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಗಂಗೂಲಿ ರಾಜೀನಾಮೆ ಸುದ್ದಿಯನ್ನು ನಿರಾಕರಿಸಿದ್ದಾರೆ. ಜೊತೆಗೆ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂಬುದನ್ನು ಜೈ ಶಾ ಖಚಿತ ಪಡಿಸಿದ್ದಾರೆ .
ಕಳೆದ ತಿಂಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಂಗಾಳದಲ್ಲಿ ಸೌರವ್ ಗಂಗೂಲಿ ರಾತ್ರಿ ಭೋಜನದ ಆತಿಥ್ಯ ವಹಿಸಿದ್ದರು. ಇದಾದ ಬಳಿಕ ಅವರ ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ಧಿಗಳು ಎಲ್ಲೆಡೆ ಹರಿದಾಡುತ್ತಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!