ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ದಕ್ಷಿಣ ಭಾರತದ ಜನಪ್ರಿಯ ನಟಿ ಚಿತ್ರಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೂಲತಃ ಕೇರಳದವರಾಗಿದ್ದ ಚಿತ್ರಾ ಅವರು ದಕ್ಷಿಣ ಭಾರತದ ಎಲ್ಲ ಭಾಷೆಯ ಸುಮಾರು 100 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಚಿತ್ರಾ ಅವರ ನಿಧನಕ್ಕೆ ಸಿನಿಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಹಿಂದಿ ಸಿನಿಮಾಗಳಲ್ಲೂ ಚಿತ್ರಾ ಅಭಿನಯಿಸಿದ್ದರು. ಕನ್ನಡದ ‘ಸುಂದರ ಸ್ವಪ್ನಗಳು’, ‘ಕೃಷ್ಣ ಮೆಚ್ಚಿದ ರಾಧೆ’ ‘ಅಜಯ್ ವಿಜಯ್’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಚೆನ್ನೈನ ಸಾಲಿಗ್ರಾಂದಲ್ಲಿ ಚಿತ್ರಾ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ.