ಟಿ20 ವಿಶ್ವಕಪ್ ಗೆ ಬಲಿಷ್ಠ ತಂಡ ಪ್ರಕಟಿಸಿದ ದಕ್ಷಿಣ ಆಫ್ರಿಕಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಟಿ20 ವಿಶ್ವಕಪ್ ಗಾಗಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು 15 ಆಟಗಾರರನ್ನೊಳಗೊಂಡ ಹರಿಣಗಳ ಪಡೆ ಪ್ರಕಟಿಸಿದ್ದು,, ಏಯ್ಡನ್ ಮಾರ್ಕ್‌ರಮ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಮುಂಬರುವ ಜೂನ್ 01ರಿಂದ ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ಆರಂಭವಾಗಲಿದೆ .

ಇನ್ನು SA20 ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿದ್ದ ಆರಂಭಿಕ ಬ್ಯಾಟರ್ ರಿಯಾನ್ ರಿಕೆಲ್ಟನ್ ಹಾಗೂ ವೇಗಿ ಓಟ್ಟಿನೆಲ್ ಬಾರ್ಟ್‌ಮನ್ ಅವರಿಗೆ ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿದೆ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರಿಯಾನ್ ರಿಕೆಲ್ಟನ್, ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಅವರ ಜತೆಗೂಡಿ ಇನಿಂಗ್ಸ್ ಆರಂಭಿಸುವ ಸಾಧ್ಯತೆ ದಟ್ಟವಾಗಿದೆ. ಇನ್ನು ಈ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಕ್ವಿಂಟನ್ ಡಿ ಕಾಕ್ ಅವರ ಪಾಲಿಗೆ ಕಟ್ಟಕಡೆಯ ಅಂತಾರಾಷ್ಟ್ರೀಯ ಸರಣಿ ಆಗುವ ಸಾಧ್ಯತೆಯಿದೆ. ಈಗಾಗಲೇ ಕಳೆದ ವರ್ಷವಷ್ಟೇ ಡಿ ಕಾಕ್, ಏಕದಿನ ಕ್ರಿಕೆಟ್ ಮಾದರಿಗೂ ವಿದಾಯ ಘೋಷಿಸಿದ್ದಾರೆ.

ಇನ್ನು ಚೊಚ್ಚಲ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿರುವ ಹರಿಣಗಳ ಪಡೆ ಐಪಿಎಲ್‌ನಲ್ಲಿ ಮಿಂಚುತ್ತಿರುವ ಆಟಗಾರರಿಗೆ ಮಣೆ ಹಾಕಿದೆ. ಏಯ್ಡನ್ ಮಾರ್ಕ್‌ರಮ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೇನ್, ಟ್ರಿಸ್ಟಿನ್ ಸ್ಟಬ್ಸ್ ಅವರಂತಹ ಹೊಡಿಬಡಿ ಆಟಗಾರರು ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಇನ್ನು ಬೌಲಿಂಗ್‌ನಲ್ಲಿ ಗೆರಾಲ್ಡ್ ಕೋಟ್ಕೀ, ಕಗಿಸೋ ರಬಾಡ ಸ್ಥಾನ ಪಡೆದಿದ್ದಾರೆ.

ಇನ್ನು ಫಾಫ್ ಡು ಪ್ಲೆಸಿಸ್ ನಿವೃತ್ತಿ ವಾಪಾಸ್ ಪಡೆದು ದಕ್ಷಿಣ ಆಫ್ರಿಕಾ ತಂಡ ಕೂಡಿಕೊಳ್ಳಲಿದ್ದಾರೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಇನ್ನುಳಿದಂತೆ ಕಳೆದ ಆವೃತ್ತಿಯ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಮಾಜಿ ನಾಯಕ ತೆಂಬಾ ಬವುಮಾ, ರೀಲೇ ರೂಸ್ಸೌ ಹಾಗೂ ವೇಯ್ನ್ ಪಾರ್ನೆಲ್ ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಗೆ ದಕ್ಷಿಣ ಆಫ್ರಿಕಾ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.

ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ:
ಏಯ್ಡನ್ ಮಾರ್ಕ್‌ರಮ್(ನಾಯಕ), ಓಟ್ಟಿನೆಲ್ ಬಾರ್ಟ್‌ಮನ್, ಗೆರಾಲ್ಡ್ ಕೋಟ್ಜೀ, ಕ್ವಿಂಟನ್ ಡಿ ಕಾಕ್, ಬೋರ್ನ್ ಫೋರ್ಟಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೇನ್, ಕೇಶವ್ ಮಹರಾಜ್, ಡೇವಿಡ್ ಮಿಲ್ಲರ್, ಏನ್ರಿಚ್ ನೋಕಿಯ, ಕಗಿಸೋ ರಬಾಡ, ರಿಯಾನ್ ರಿಕೆಲ್ಟನ್, ತಬ್ರೀಜ್ ಶಮ್ಸಿ, ಟ್ರಿಸ್ಟಿನ್ ಸ್ಟಬ್ಸ್.

ಮೀಸಲು ಆಟಗಾರರು: ನಂದ್ರೆ ಬರ್ಗರ್ ಹಾಗೂ ಲುಂಗಿ ಎಂಗಿಡಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!