ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ಗಳ ಅಂತರದ ಗೆಲುವು ದಾಖಲಿಸಿದ್ದು, ಈ ಮೂಲಕ ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 1-1 ಅಂತರದ ಸಮಬಲ ಸಾಧಿಸಿದೆ.
ಭಾರತ ನೀಡಿದ್ದ 240 ರನ್ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಮೂರನೇ ದಿನದಾಟದ ಅಂತ್ಯಕ್ಕೆ 40 ಓವರ್ಗಳಲ್ಲಿ 2 ವಿಕೆಟ್ನಷ್ಟಕ್ಕೆ 118 ರನ್ಗಳಿಸಿತು. ಇಂದು ತಡವಾಗಿ ಬ್ಯಾಟಿಂಗ್ ಮುಂದುವರೆಸಿದ ಆಫ್ರಿಕಾ 7 ವಿಕೆಟ್ಗಳ ಅಂತರದ ಸುಲಭ ಗೆಲುವು ಸಾಧಿಸಿದೆ.
ದಕ್ಷಿಣ ಆಫ್ರಿಕಾ ಪರ ಏಡೆನ್ ಮಾರ್ಕ್ರಮ್(31), ಕೀಗನ್ ಪೀಟರ್ಸನ್(28)ರನ್ಗಳಿಕೆ ಮಾಡಿ ವಿಕೆಟ್ ಒಪ್ಪಿಸಿದರು. ತದನಂತರ ನಾಯಕ ಎಲ್ಗರ್ ಅಜೇಯ 96ರನ್ ಹಾಗೂ ಡುಸ್ಸೆನ್ (40) ರನ್ಗಳಿಕೆ ಮಾಡಿ ತಂಡವನ್ನು ಗೆಲುವಿನತ್ತ ತೆಗೆದುಕೊಂಡು ಹೋದರು.
ಕೊನೆಯದಾಗಿ ತಂಡ 67.4 ಓವರ್ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 243ರನ್ಗಳಿಕೆ ಮಾಡಿ ಗೆಲುವು ಸಾಧಿಸಿದೆ.