ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ: ಟೀಂ ಇಂಡಿಯಾಕ್ಕೆ ಕೆ.ಎಲ್.ರಾಹುಲ್ ಸಾರಥ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದಕ್ಷಿಣ ಆಫ್ರಿಕಾ ಟಿ20ಐ ಸರಣಿಗೆ ಟೀಂ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಬಿಸಿಸಿಐ, ಜೂನ್ 9 ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಐ ಸರಣಿಯಲ್ಲಿ ಕೆ.ಎಲ್.ರಾಹುಲ್ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.
ಇನ್ನು ಜುಲೈ 1 ರಿಂದ 5 ರವರೆಗೆ ಎಡ್ಜ್ಬಾಸ್ಟನ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ ಐದನೇ ಮತ್ತು ಅಂತಿಮ ಟೆಸ್ಟ್ ಮತ್ತು ಎಸ್‌ಎ ಟಿ 20ಐಗೆ ಭಾರತ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಭಾನುವಾರ ಸಭೆ ಸೇರಿತ್ತು.
ದಕ್ಷಿಣ ಆಫ್ರಿಕಾ ಟಿ20ಐಗೆ ತಂಡದಲ್ಲಿ ಹಲವಾರು ಹೊಸ ಮುಖಗಳನ್ನು ಕಾಣಬಹುದು, ಉಮ್ರಾನ್ ಮಲಿಕ್ ಮತ್ತು ಅರ್ಷ್ದೀಪ್ ಸಿಂಗ್ ತಂಡ ಸೇರಿದ್ದಾರೆ. ಇನ್ನು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ವರ್ಷ ಟಿ 20 ವಿಶ್ವಕಪ್ ನಂತರ ಮೊದಲ ಬಾರಿಗೆ ಭಾರತ ತಂಡಕ್ಕೆ ಮರಳಿದ್ದಾರೆ.
ಟಿ 20 ಟೀಮ್
ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ವೈ ಚಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಆರ್ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್
ಟೆಸ್ಟ್ ಟೀಮ್
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ವಿಸಿ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ್ ಪೂಜಾರ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆ.ಎಸ್.ಭರತ್ (ವಿಕೆಟ್ ಕೀಪರ್), ಆರ್ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!