Sunday, August 14, 2022

Latest Posts

ಶ್ರೀಲಂಕಾ ವಿರುದ್ಧ 4 ವಿಕೆಟ್​ಗಳ ರೋಚಕ ಜಯ ಸಾಧಿಸಿದ ದಕ್ಷಿಣ ಆಫ್ರಿಕಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಾಯಕ ಟೆಂಬ ಬವೂಮ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಮತ್ತು ಡೇವಿಡ್ ಮಿಲ್ಲರ್​ ಸ್ಫೋಟಕ ಆಟದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾ ವಿರುದ್ಧ 4 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.
ಶ್ರೀಲಂಕಾ ನೀಡಿದ್ದ 143 ರನ್​ಗಳ ಗುರಿಯನ್ನು ದಕ್ಷಿಣ ಆಫ್ರಿಕಾ ತಂಡ 19.5 ಓವರ್​ಗಳಲ್ಲಿ 6 ವಿಕೆಟ್​ ಕಳೆದುಕೊಂಡು ತಲುಪಿತು. ಬವೂಮ 46 ಎಸೆತಗಳಲ್ಲಿ 46 ರನ್​ ಸಿಡಿಸಿದರೆ, ಡೇವಿಡ್ ಮಿಲ್ಲರ್​ 13 ಎಸೆತಗಳಲ್ಲಿ ಅಜೇಯ 23 ರನ್​ ಮತ್ತು ರಬಾಡ ಅಜೇಯ 13 ರನ್​ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಸೆಮಿಫೈನಲ್​ ಪ್ರವೇಶಿಸಲು ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್​ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 142 ರನ್​ಗಳಿಗೆ ಸರ್ವಪತನ ಕಂಡಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss