April 2, 2026
Thursday, April 2, 2026
spot_img

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ ರಾಸ್ಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಅನುಭವಿ ಬ್ಯಾಟರ್ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

ಏಳು ವರ್ಷಗಳ ಕಾಲ ಸೌತ್ ಆಫ್ರಿಕಾ ತಂಡದ ಪ್ರಮುಖ ಬ್ಯಾಟರ್ ಆಗಿದ್ದ ಅವರು, ಇಂದು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಈ ನಿರ್ಧಾರ ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

2018ರಲ್ಲಿ ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಡಸ್ಸೆನ್, ಅಲ್ಪಾವಧಿಯಲ್ಲೇ ದಕ್ಷಿಣ ಆಫ್ರಿಕಾ ತಂಡದ ಮಧ್ಯಕ್ರಮದ ಭರವಸೆಯ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದರು. ವಿಶೇಷವಾಗಿ ಏಕದಿನ ಮಾದರಿಯಲ್ಲಿ ಅವರು ತಂಡಕ್ಕೆ ಅನೇಕ ಮಹತ್ವದ ಇನ್ನಿಂಗ್ಸ್‌ಗಳನ್ನು ನೀಡಿದ್ದರು.

ಇದನ್ನೂ ಓದಿ:

ತಮ್ಮ ವೃತ್ತಿಜೀವನದಲ್ಲಿ ಅವರು 71 ಏಕದಿನ ಪಂದ್ಯಗಳಲ್ಲಿ 6 ಶತಕ ಮತ್ತು 17 ಅರ್ಧಶತಕಗಳೊಂದಿಗೆ 2657 ರನ್ ಗಳಿಸಿದ್ದಾರೆ. ಜೊತೆಗೆ 57 ಟಿ20 ಪಂದ್ಯಗಳಲ್ಲಿ 1406 ರನ್ ಹಾಗೂ 18 ಟೆಸ್ಟ್ ಪಂದ್ಯಗಳಲ್ಲಿ 905 ರನ್ ಕಲೆಹಾಕಿದ್ದಾರೆ. ಕಳೆದ ಕೆಲವು ವರ್ಷಗಳಿಂದ ನಿರಂತರ ಕ್ರಿಕೆಟ್ ಆಡಿರುವ ಅವರು ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !