ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ ರಾಸ್ಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಅನುಭವಿ ಬ್ಯಾಟರ್ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಏಳು ವರ್ಷಗಳ ಕಾಲ ಸೌತ್ ಆಫ್ರಿಕಾ ತಂಡದ ಪ್ರಮುಖ ಬ್ಯಾಟರ್ ಆಗಿದ್ದ ಅವರು, ಇಂದು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಈ ನಿರ್ಧಾರ ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. 2018ರಲ್ಲಿ ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಡಸ್ಸೆನ್, ಅಲ್ಪಾವಧಿಯಲ್ಲೇ ದಕ್ಷಿಣ ಆಫ್ರಿಕಾ … Continue reading ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ ರಾಸ್ಸಿ