ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರವು ದೇಶಾದ್ಯಂತ ಪ್ರಮುಖ ಪ್ರದೇಶಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸುತ್ತಿದೆ. ಆದರೆ, ಆ ಪ್ರದೇಶಗಳಲ್ಲಿ ದರೋಡೆಕೋರರು ಈ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿ, ರೈಲುಗಳನ್ನು ಹಾನಿಗೊಳಿಸುವುದರ ಜೊತೆಗೆ ಪ್ರಯಾಣಿಕರ ಜೀವದ ಜೊತೆಗೂ ಆಟವಾಡುತ್ತಿದ್ದಾರೆ.
ವಂದೇ ಭಾರತ್ ರೈಲುಗಳು ಮತ್ತು ಇತರ ರೈಲುಗಳ ಮೇಲೆ ದಾಳಿ ಮಾಡಿದವರನ್ನು ರೈಲ್ವೆ ಪೊಲೀಸರು ಬಂಧಿಸುತ್ತಿದ್ದಾರೆ. ಇದುವರೆಗೂ 39 ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ಹೇಳಿಕೆ ಬಿಡುಗಡೆ ಮಾಡಿದೆ. ಈ ದಾಳಿಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದೆ.
ರೈಲುಗಳ ಮೇಲೆ ಕಲ್ಲು ತೂರಾಟ ನಡೆಸುವ ಪುಂಡ ಪೋಕರಿಗಳನ್ನು ತಡೆಯಲು ದಕ್ಷಿಣ ಮಧ್ಯ ರೈಲ್ವೆ ಮಹತ್ವದ ಘೋಷಣೆ ಮಾಡಿದೆ. ಇನ್ನು ಮುಂದೆ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಯಾಣಿಕರಿಗೆ ಅಥವಾ ರೈಲ್ವೆ ಆಸ್ತಿಗೆ ಹಾನಿ ಉಂಟುಮಾಡುವ ಕೃತ್ಯಗಳನ್ನು ಯಾರೂ ಮಾಡಬಾರದು, ಐದು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗಬಹುದು ಎಂದು ಸೂಚಿಸಿದೆ.