ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದ ಸ್ಟಾರ್ ಗಾಯಕಿ ಕಲ್ಪನಾ ರಾಘವೇಂದರ್ ಅವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಬಳಿಕ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಗಾಯಕಿಯನ್ನು ದಾಖಲಿಸಲಾಗಿದೆ.
2 ದಿನಗಳಿಂದ ಮನೆಯ ಬಾಗಿಲುಗಳು ತೆರೆಯದ ಹಿನ್ನೆಲೆ ಸ್ಥಳೀಯರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದಾವಿಸಿದ ಪೊಲೀಸರು ಬಾಗಿಲನ್ನು ಒಡೆದಿದ್ದಾರೆ. ಈ ವೇಳೆ, ಅವರು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿದ್ದರು. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಲ್ಪನಾ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಗಾಯಕಿಗೆ ಪ್ರಜ್ಞೆ ಬಂದಿದೆ. ಕಲ್ಪನಾಗೆ ಸದ್ಯ ಯಾವುದೇ ರೀತಿಯ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.