ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹದಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿದ್ದು, ಇನ್ನೂ ಹತ್ತು ಮಂದಿ ಪ್ರವಾಹದಲ್ಲಿ ನಾಪತ್ತೆಯಾಗಿದ್ದಾರೆ. ಮಧ್ಯ ಮತ್ತು ಆಗ್ನೇಯ ಪ್ರದೇಶಗಳಲ್ಲಿ ಪ್ರವಾಹ ಸಂಭವಿಸಿದ್ದು, ಧಾರಾಕಾರ ಮಳೆಯಿಂದ ಉಂಟಾದ ಭೂಕುಸಿತದಿಂದ ಐದು ಮನೆಗಳು ಧರೆಗುರುಳಿವೆ.
ಜುಲೈ 9ರಿಂದ ಭಾರೀ ಮಳೆಯಿಂದಾಗಿ 5,570 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಭಾರೀ ಮಳೆಯಿಂದಾಗಿ 25,470 ಮನೆಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. 4,200 ನಿರಾಶ್ರಿತರನ್ನು ತಾತ್ಕಾಲಿಕ ಶಿಬಿರಗಳಿಗೆ ಸ್ಥಳಾಂತರಿಸಲಾಯಿತು. ಭಾರೀ ಮಳೆ ಮತ್ತು ಪ್ರವಾಹದಿಂದಾಗಿ 20 ವಿಮಾನ ಸೇವೆಗಳು, ಬುಲೆಟ್ ಮತ್ತು ಸಾಮಾನ್ಯ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 200 ರಸ್ತೆಗಳು ಪ್ರವಾಹದಿಂದ ಮುಚ್ಚಿವೆ.
ದಕ್ಷಿಣ ಕೊರಿಯಾದ ಕೆಲವು ಭಾಗಗಳಲ್ಲಿ ಭಾನುವಾರ ಸಂಜೆಯವರೆಗೂ ಭಾರೀ ಮಳೆ ಬೀಳಲಿದೆ ಎಂದು ದಕ್ಷಿಣ ಕೊರಿಯಾದ ಹವಾಮಾನ ಸಂಸ್ಥೆ ತಿಳಿಸಿದೆ. ಜುಲೈ 9 ರಿಂದ, ಗಂಗ್ಜು ನಗರ, ಚಿಯೋಂಗ್ಯಾಂಗ್ ಕೌಂಟಿಯಲ್ಲಿ 600 ಮಿಲಿಮೀಟರ್‌ಗಿಂತ ಹೆಚ್ಚು ಮಳೆಯಾಗಿದೆ. ದಕ್ಷಿಣ ಕೊರಿಯಾದ ಮಧ್ಯ ಪ್ರದೇಶಗಳು ಅತಿ ಹೆಚ್ಚು ಮಳೆಯನ್ನು ದಾಖಲಿಸಿವೆ.