ದಕ್ಷಿಣ ಕೊರಿಯಾದಲ್ಲಿ ಭೀಕರ ದುರಂತ: ಕಾಲ್ತುಳಿತಕ್ಕೆ 149 ಜನರು ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ದಕ್ಷಿಣ ಕೊರಿಯಾದ ಸಿಯೋಲ್‌ ನಲ್ಲಿ ಶನಿವಾರ ರಾತ್ರಿ ಹ್ಯಾಲೋವೀನ್ ಹಬ್ಬದ ಆಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 149 ಜನರು ಸಾವನ್ನಪ್ಪಿ, 150 ಜನರು ಗಾಯಗೊಂಡಿದ್ದಾರೆ ಎಂದು ನಗರದ ಅಗ್ನಿಶಾಮಕ ಇಲಾಖೆ ತಿಳಿಸಿದೆ. ಇದು ದಕ್ಷಿಣ ಕೊರಿಯಾದ ಇತಿಹಾಸದಲ್ಲಿ ಅತ್ಯಂತ ಭೀಕರ ಅವಘಡಗಳಲ್ಲಿ ಒಂದಾಗಿದೆ.
ರಾಷ್ಟ್ರದ ರಾಜಧಾನಿ ಸಿಯೋಲ್‌ನ ಇಟಾವಾನ್ ಜಿಲ್ಲೆಯಲ್ಲಿ ವರ್ಷದ ಅತ್ಯಂತ ಸಂಭ್ರಮದ ಹಬ್ಬ ಹ್ಯಾಲೋವಿನ್‌ ಆಚರಣೆಗೆ ಲಕ್ಷಾಂತರ ಜನರು ನೆರೆದಿದ್ದರು. ರಾತ್ರಿ ಇಟಾವಾನ್ ನಗರದ ಕಿರಿದಾದ ಬೀದಿಗಳಲ್ಲಿ ಅಪಾರ ಜನಸ್ತೋಮವಿತ್ತು. ಈ ವೇಳೆ ಸ್ಥಳದಲ್ಲಿ ಜನಸಂದಣಿ ಹೆಚ್ಚಾಗಿದ್ದರಿಂದ ನೂಕುನುಗ್ಗಲು ಆರಂಭವಾಗಿದೆ. ಪರಿಣಾಮವಾಗಿ ಒಂದಷ್ಟು ಮಂದಿ ಉಸಿರಾಟದ ಸಮಸ್ಯೆಯಿಂದ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಈ ವೇಳೆ ಉಂಟಾದ ಗಾಬರಿಯಿಂದಾಗಿ ಜನರು ದಿಕ್ಕಾಪಾಲಾಗಿ ಓಡಿದ್ದು, ಕಾಲ್ತುಳಿತ ಸಂಭವಿಸಿದೆ. ಘಟನೆಯ ಸ್ಥಳದಲ್ಲಿ ಕನಿಷ್ಢ 50 ಮಂದಿಗೆ ಹೃದಯ ಸ್ತಂಭನವಾಗಿದೆ. ಸಂತ್ರಸ್ತರ ನೆರವಿಗಾಗಿ 140 ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರ ಸ್ಥಿತಿ ಗಂಭೀರವಾಗಿದೆ ಎಂದು ಸಿಯೋಲ್‌ನ ಯೋಂಗ್ಸಾನ್ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಚೋಯ್ ಸಿಯೋಂಗ್-ಬೀಮ್ ಹೇಳಿದ್ದಾರೆ.  ಭಾನುವಾರ ದಕ್ಷಿಣ ಕೊರಿಯಾದಲ್ಲಿ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!