ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಂಗ್ ಕಾಂಗ್ ಗೆ ಹೊರಡಲು ತಯಾರಿ ನಡೆಸುತ್ತಿದ್ದಾಗ ವಿಮಾನವು ಭೀಕರ ಅಪಘಾತಕ್ಕೆ ಸಿಲುಕಿದ ಘಟನೆ ದಕ್ಷಿಣ ಕೊರಿಯಾದ ಗಿಮ್ಹೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಏರ್ ಬುಸಾನ್ ಗೆ ಸೇರಿದ ಏರ್ ಬಸ್ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ತಕ್ಷಣ ಎಲ್ಲಾ 169 ಪ್ರಯಾಣಿಕರು ಮತ್ತು ಏಳು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಒಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಬುಸಾನ್’ನ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.