ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಪರಿಷತ್ ಚುನಾವಣೆಯ ನೈರುತ್ಯ ಪದವೀಧರರ ಕ್ಷೇತ್ರದ ಮತ ಏಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ ಅವರು ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಶಿವಮೊಗ್ಗದ ಜನಪ್ರಿಯ ಸರ್ಜಿ ಆಸ್ಪತ್ರೆಯ ಸಂಸ್ಥಾಪಕರು ಹಾಗೂ ವೈದ್ಯರಾದ ಸರ್ಜಿ ಗೆಲುವು ಸಾಧಿಸಿದ್ದು, ಅಭಿಮಾನಿಗಳಲ್ಲಿ ಹರ್ಷೋದ್ಘಾರ ಮೊಳಗಿದೆ.
37,627 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ಗೆ 13,516 ಮತ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಕೇವಲ 7,039 ಮತಗಳನ್ನು ಪಡೆದು ಮೂರನೇ ಸ್ಥಾನ ಗಳಿಸಿದ್ದಾರೆ.