ದಕ್ಷಿಣದ ಸಿನಿಮಾ ನನ್ನ ತವರು ಮನೆಯಂತೆ: ಬಾಲಿವುಡ್ ನಟಿ ಜಾನ್ವಿ ಕಪೂರ್

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಬಾಲಿವುಡ್ ನಟಿ ಜಾನ್ವಿ ಕಪೂರ್ (Janhavi Kapoor) ದಕ್ಷಿಣದ ಸಿನಿಮಾಗಳತ್ತ ಹೆಚ್ಚು ಗಮನ ನೀಡ್ತಿದ್ದಾರೆ. ಸದ್ಯ ಜಾನ್ವಿ ಎರಡು ತೆಲುಗು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.

ಹಲವು ದಿನಗಳಿಂದ ಹೈದರಾಬಾದ್ ನಲ್ಲೇ ಬೀಡು ಬಿಟ್ಟಿರುವ ಜಾನ್ವಿ, ದಕ್ಷಿಣದ ಸಿನಿಮಾ ರಂಗ ನನ್ನ ತವರು ಮನೆಯಂತೆ ಭಾಸವಾಗುತ್ತಿದೆ. ಪ್ರತಿ ಕ್ಷಣವೂ ಅಮ್ಮ ನೆನಪಾಗುತ್ತಿದ್ದಾರೆ ಎಂದು ಮಾತನಾಡಿದ್ದಾರೆ.

ಇತ್ತೀಚೆಗಷ್ಟೇ ಜಾನ್ವಿ ಕಪೂರ್, ಜ್ಯೂನಿಯರ್ ಎನ್‌ಟಿಆರ್ (Jr.ntr) ಜೊತೆ ಸಿನಿಮಾ ಒಪ್ಪಿಕೊಂಡಿದ್ದರು. ಆ ಸಿನಿಮಾದ ಶೂಟಿಂಗ್ ಕೂಡ ಇನ್ನೂ ಮುಗಿದಿಲ್ಲ, ಅದಕ್ಕೂ ಮುನ್ನವೇ ಮತ್ತೊಂದು ಬಂಪರ್ ಆಫರ್‌ ಅನ್ನು ನಟಿ ತಮ್ಮದಾಗಿಸಿಕೊಂಡಿದ್ದಾರೆ.

ಮತ್ತೊಬ್ಬ ತೆಲುಗಿನ ನಟನ ಜೊತೆ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಹೊಸ ಸಿನಿಮಾದಲ್ಲಿ ನಾಗಾರ್ಜುನ ಪುತ್ರ ಅಖಿಲ್ ಅಕ್ಕಿನೇನಿಗೆ (Akhil Akkineni) ನಾಯಕಿಯಾಗಿ ಜಾನ್ವಿ ಕಪೂರ್ ಸೆಲೆಕ್ಟ್ ಆಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!