ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ: ಮತದಾನಕ್ಕೆ 1 ಗಂಟೆ ಅವಧಿ ವಿಸ್ತರಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜೂನ್ 13ರಂದು ನಡೆಯಲಿರುವ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಅವಧಿ ಒಂದು ಗಂಟೆ ವಿಸ್ತರಣೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿ ಜಿ.ಸಿ.ಪ್ರಕಾಶ್ ಮಾಹಿತಿ ನೀಡಿದರು. ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 1,41,961 ಮಂದಿ ಪದವೀಧರ ಮತದಾರರಿದ್ದಾರೆ. ಈ ಪೈಕಿ 82,505 ಪುರುಷರು 59,432 ಮಹಿಳೆಯರು ಹಾಗೂ 24 ಇತರೆ ಮತದಾರರಿದ್ದಾರೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತವನ್ನು ಚಲಾಯಿಸಲು ಅವಕಾಶವಿದ್ದು, ಮತದಾನ ಮಾಡಲು ಒಂದು ಗಂಟೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ಮಾಹಿತಿ ನೀಡಿದರು. ಅರ್ಹ ಮತದಾರರು ರಾಜ್ಯದ ಯಾವುದೇ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಕೂಡ, ಮತದಾನ ಮಾಡಲು ಅನುಕೂಲವಾಗುವಂತೆ ರಜೆ ನೀಡಲು ಆದೇಶಿಸಲಾಗಿದೆ. ಮೈಸೂರು, ಮಂಡ್ಯ ಚಾಮರಾಜನಗರ, ಹಾಸನ ಸೇರಿದಂತೆ 4 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 150 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಪ್ರಕಾಶ್ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!