August 20, 2026
Thursday, August 20, 2026
spot_img

ಜನಸಂಖ್ಯೆ ನಿಯಂತ್ರಿಸಿದ ದಕ್ಷಿಣ ರಾಜ್ಯಗಳಿಗೆ ಶಿಕ್ಷೆ ಬೇಡ : ಕ್ಷೇತ್ರ ಪುನರ್ವಿಂಗಡನೆ ಶಾ ಎದುರು ಡಿಕೆಶಿ ಖಡಕ್‌ ಮಾತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜನಸಂಖ್ಯೆ ನಿಯಂತ್ರಣದಲ್ಲಿ ಯಶಸ್ವಿಯಾಗಿರುವ ದಕ್ಷಿಣ ರಾಜ್ಯಗಳಿಗೆ ಕ್ಷೇತ್ರ ಪುನರ್ವಿಂಗಡಣೆ ವೇಳೆ ಅನ್ಯಾಯವಾಗಬಾರದು ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ನೇತೃತ್ವದಲ್ಲಿ ಕೇರಳದ ಕೋವಲಂನಲ್ಲಿ 31ನೇ ದಕ್ಷಿಣ ವಲಯ ಮಂಡಳಿ ಸಭೆ ನಡೆದಿದ್ದು, ಕ್ಷೇತ್ರಪುನರ್‌ವಿಂಗಡಣೆ ವಿಚಾರ ಮುಖ್ಯವಾಗಿ ಚರ್ಚೆಯಾಗಿದೆ.

1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು ಮುಂದಿನ 25 ವರ್ಷಗಳ ಕಾಲ ಲೋಕಸಭೆಯ ಒಟ್ಟು 543 ಸ್ಥಾನಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು. ದಕ್ಷಿಣ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯ ಕಡಿಮೆಯಾಗಬಾರದು. ಜನಸಂಖ್ಯೆ ನಿಯಂತ್ರಣದಲ್ಲಿ ದಕ್ಷಿಣ ರಾಜ್ಯಗಳು ಸಾಧಿಸಿರುವ ಯಶಸ್ಸು, ಅವುಗಳ ರಾಜಕೀಯ ಧ್ವನಿಯನ್ನು ಕಡಿಮೆ ಮಾಡಲು ಕಾರಣವಾಗಬಾರದು. ಯಾವುದೇ ದಕ್ಷಿಣ ರಾಜ್ಯ ತನ್ನ ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳುವುದಿಲ್ಲ ಎಂಬ ಭರವಸೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಪ್ರಾತಿನಿಧ್ಯವೆಂದರೆ ಕೇವಲ ಸಂಖ್ಯೆಯಲ್ಲ, ಅದು ರಾಜಕೀಯ ಪ್ರಭಾವ ಮತ್ತು ಧ್ವನಿಯೂ ಆಗಿದೆ ಎಂದಿದ್ದಾರೆ.

ಇನ್ನೂ 25 ವರ್ಷಗಳ ಕಾಲ 1971ರ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಕ್ಷೇತ್ರ ಪುನರ್ವಿಂಗಡಣೆ ನಡೆಸಬೇಕು ಹಾಗೂ 543 ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಕಡಿಮೆ ಮಾಡಬಾರದು ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !