ವಿಧಾನ ಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರ: ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್ :

ವಿಧಾನ ಪರಿಷತ್‌ನ ಪದವೀಧರರು ಮತ್ತು ಶಿಕ್ಷಕರ 6 ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಗುರುವಾರ ನಡೆದಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಕೆ.ವಿ. ವಿವೇಕಾನಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಚುನಾವಣಾ ಇತಿಹಾಸದಲ್ಲೇ ಮೊದಲ ಪ್ರಾಶಸ್ತ್ಯ ಮತದಲ್ಲಿ ಮೊದಲ ಗೆಲುವು ಇದಾಗಿದೆ.

ಜೆಡಿಎಸ್‌ ಅಭ್ಯರ್ಥಿ ವಿವೇಕಾನಂದಗೆ 10,823 ಮತ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡಗೆ 6,201 ಮತ ಬಂದಿವೆ, ವಾಟಾಳ್ ನಾಗರಾಜ್ 84 ಮತ ಗಳಿಸಿದ್ದಾರೆ. ಈ ಮೂಲಕ 4,622 ಮತಗಳ ಭಾರಿ ಅಂತರದಿಂದ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಜೆಡಿಎಸ್‌ ಅಭ್ಯರ್ಥಿ ವಿವೇಕಾನಂದ ಗೆಲುವು ದಾಖಲಿಸಿದ್ದಾರೆ.

ಕ್ಷೇತ್ರದಲ್ಲಿ 1049 ಕುಲಗೆಟ್ಟ ಮತಗಳು (ತಿರಸ್ಕೃತ) ದಾಖಲಾಗಿವೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ (south teachers constituency) ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳು ಬರುತ್ತವೆ. ಒಟ್ಟು 20,549 ಮತದಾರರ ಪೈಕಿ 18,979 ಮತಗಳು ಚಲಾವಣೆಯಾಗಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!