Sunday, December 10, 2023

Latest Posts

ಕೇರಳ ಪ್ರವೇಶಿಸಿದ ನೈಋತ್ಯ ಮಾನ್ಸೂನ್​: ಮುಂದಿನ ದಿನಗಳಲ್ಲಿ ಭಾರೀ ಮಳೆಯ ನಿರೀಕ್ಷೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೈರುತ್ಯ ಮಾನ್ಸೂನ್​ ಸಾಮಾನ್ಯ ಆರಂಭದ ದಿನಾಂಕಕ್ಕಿಂತ ಮೂರು ದಿನಗಳ ಮುಂಚಿತವಾಗಿಯೇ ಇಂದು ಕೇರಳದಲ್ಲಿ ಆರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆ ಮುಂದಿನ 24 ಗಂಟೆಗಳಲ್ಲಿಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ಹಿಮಾಲಯ, ಬಿಹಾರ, ಮತ್ತು ಪಶ್ಚಿಮ ಬಂಗಾಳದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗಲಿದೆ.

ಸಾಮಾನ್ಯವಾಗಿ ಜೂನ್​ 1 ರಂದು ಮಾನ್ಸೂನ್​ ಮಾರುತಗಳು ಕೇರಳ ಪ್ರವೇಶಿಸುವುದು ವಾಡಿಕೆ. ಈ ವರ್ಷ ಮೂರು ದಿನ ಮೊದಲೇ ಮಾನ್ಸೂನ್​ ಪ್ರವೇಶವಾಗಿದೆ ಎಂದು ಐಎಂಡಿ ತಿಳಿಸಿದೆ.
ಕೇರಳ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯನ್ನು ತರಿಸಲಿದ್ದು, ಬಂಗಾಳ ಕೊಲ್ಲಿ ಕರಾವಳಿಯಲ್ಲೂ ಮುಂದಿನ ಎರಡು ದಿನಗಳಲ್ಲಿ ಮಳೆ ಬೀಳಲಿದೆ.ಅರಬ್ಬೀ ಸಮುದ್ರದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಕರ್ನಾಟಕ ಕರಾವಳಿಯಲ್ಲೂ ಎಚ್ಚರಿಕೆ ನೀಡಲಾಗಿದೆ. ಅಂಡಮಾನ್​ ಮತ್ತು ನಿಕೋಬಾರ್​, ಲಕ್ಷದ್ವೀಪದಲ್ಲೂ ಮಳೆ ಪ್ರಮಾಣ ಹೆಚ್ಚಿರಲಿದೆ ಎಂದು ಎಚ್ಚರಿಕೆ ನೀಡಿದೆ.

ಕರ್ನಾಟಕ, ಆಂದ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಮುಂದಿನ 24 ಗಂಟೆಯೊಳಗೆ ಮಳೆಯಾಗಲಿದ್ದು, ತಮಿಳುನಾಡು, ಪುದುಚೇರಿ ಮತ್ತು ಕರೈಕಲ್​ನಲ್ಲಿ ಐದು ದಿನದ ನಂತರ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಸದ್ಯ ಮಾನ್ಸೂನ್​ ಮಾರುತಗಳು 40-50 ಕಿಮೀ ವೇಗದಲ್ಲಿದ್ದು, ಇದು ತನ್ನ ವೇಗವನ್ನು ಮತ್ತಷ್ಟು ಹೆಚ್ಚಿಸಿ, ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದೆ . ಒಟ್ಟಾರೆ ಈ ಬಾರಿಯ ಮಾನ್ಸೂನ್​​ ದೇಶಾದ್ಯಂತ ಉತ್ತಮ ಮಳೆ ತರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!