ಮೇ 31 ರಂದು ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಮುಂಗಾರು ಮುಂಚಿತವಾಗಿಯೇ ಆಗಮಿಸಲಿದೆ ಎಂದು ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ.

ಈ ವರ್ಷ ಸಮಯಕ್ಕಿಂತ ಮುಂಚಿತವಾಗಿಯೇ ಮುಂಗಾರಿನ ಆಗಮನವಾಗಲಿದೆ. ನೈಋತ್ಯ ಮುಂಗಾರು ಮೇ 31ಕ್ಕೆ ಕೇರಳ ತಲುಪುವ ನಿರೀಕ್ಷೆಯಿದೆ. ಇದಕ್ಕೂ ಮುನ್ನ ಮೇ 19ರಂದು ಅಂಡಮಾನ್ ನಿಕೋಬಾರ್ ತಲುಪುವ ಸಾಧ್ಯತೆಯಿದೆ.

ಈ ಕುರಿತು ಮಾಹಿತಿ ನೀಡಿರುವ ಇಲಾಖೆ, ಇದೇ 31ಕ್ಕೆ ಕೇರಳ ರಾಜ್ಯವನ್ನು ಮುಂಗಾರು ಪ್ರವೇಶಿಸಲಿದ್ದು, ನಾಲ್ಕು ದಿನ ಹೆಚ್ಚೂ ಕಡಿಮೆ ಆಗಬಹುದು. ಆದರೆ ಈ ಬಾರಿಯ ನಾಲ್ಕು ತಿಂಗಳ ಮಳೆಗಾಲ ಕೃಷಿ ಆಧಾರಿತ ಭಾರತದ ಆರ್ಥಿಕತೆಗೆ ಚೈತನ್ಯ ನೀಡಲಿದೆ ಎಂದು ಹೇಳಿದೆ.

ಕೇರಳದಲ್ಲಿ ಮಾನ್ಸೂನ್ ಪ್ರಾರಂಭವಾಗುವ ಸಾಮಾನ್ಯ ದಿನಾಂಕ ಜೂನ್ 1 ಆಗಿರುವುದರಿಂದ ಇದು ಆ ದಿನಕ್ಕೆ ಹತ್ತಿರವಾಗಿದೆ. ಅಲ್ಲದೇ ಈ ಬಾರಿ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ದಾಖಲಾಗಬಹುದು ಎಂದು ಕಳೆದ ತಿಂಗಳು ನಮ್ಮ ಇಲಾಖೆ ಹೇಳಿತ್ತು. ಅದಕ್ಕೆ ಪೂರಕವಾಗಿ ಮುಂಗಾರು ಚಲನೆ ಕಂಡುಬಂದಿದೆ ಎಂದು ಹೇಳಿದೆ .

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here