September 26, 2026
Saturday, September 26, 2026
spot_img

ಗುರುವಾರ ನೈಋತ್ಯ ಮುಂಗಾರು ಕೇರಳಕ್ಕೆ ಎಂಟ್ರಿ, ರಾಜ್ಯದಲ್ಲೂ ಇನ್ನೆರಡು ದಿನ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಜನರು ಮಳೆಗಾಲಕ್ಕಾಗಿ ಕಾಯ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಮಳೆ ಆರಂಭವಾಗಲಿದೆ. ನೈರುತ್ಯ ಮುಂಗಾರು ಕೊನೆಗೂ ಚುರುಕುಗೊಂಡಿದ್ದು, ಗುರುವಾರ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ. ಕೇರಳ ಪ್ರವೇಶದ ಬಳಿಕ ಎರಡು ದಿನದಲ್ಲಿ ಮುಂಗಾರು ಕರ್ನಾಟಕಕ್ಕೆ ಆಗಮಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂಗಾರು ಪ್ರವೇಶಕ್ಕೆ ಅಗತ್ಯವಿರುವ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ತಿಳಿಸಿದ್ದಾರೆ. ಗಾಳಿಯ ದಿಕ್ಕು, ವೇಗ ಹಾಗೂ ವಾತಾವರಣದಲ್ಲಿನ ವಿವಿಧ ಅಂಶಗಳು ಮುಂಗಾರು ಮುಂದುವರಿಯಲು ನೆರವಾಗುತ್ತಿವೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು ಗಾಳಿಯ ವ್ಯಾಪ್ತಿಯನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುವುದು. ಇದರ ನಡುವೆಯೇ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Must Read