ಮುಲಾಯಂ ಸಿಂಗ್‌ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ಗಣ್ಯರ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಮಾಜವಾದಿ ಪಕ್ಷದ ವರಿಷ್ಠ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ (82) ಇಂದು ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ʻಮುಲಾಯಂ ಸಿಂಗ್ ಯಾದವ್ ಅವರು ಗಮನಾರ್ಹ ವ್ಯಕ್ತಿತ್ವ ಹೊಂದಿದ್ದಂತವರು ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದ ಅವರು ವಿನಮ್ರ ಮತ್ತು ಉತ್ತಮ ನಾಯಕರಾಗಿ ವ್ಯಾಪಕವಾಗಿ ಪ್ರಶಂಸೆ ಹೊಂದಿದ್ದಂತವರು. ಅತ್ಯಂತ ಶ್ರದ್ಧೆಯಿಂದ ಜನರಿಗೆ ಸೇವೆ ಸಲ್ಲಿಸಿದರು. ಲೋಕನಾಯಕ್ ಜೆಪಿ ಮತ್ತು ಡಾ. ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದು ಬರೆದಿದ್ದಾರೆ.

ನಾವು ನಮ್ಮ ರಾಜ್ಯಗಳ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವಾಗ ನಾನು ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಅನೇಕ ಸಂವಾದಗಳನ್ನು ನಡೆಸಿದೆ. ನಮ್ಮ ನಡುವೆ ನಿಕಟ ಒಡನಾಟವಿತ್ತು. ನಾನು ಯಾವಾಗಲೂ ಅವರ ಅಭಿಪ್ರಾಯಗಳನ್ನು ಕೇಳಲು ಎದುರು ನೋಡುತ್ತಿದ್ದೆ. ಅವರ ನಿಧನ ನನಗೆ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬ ಮತ್ತು ಲಕ್ಷಾಂತರ ಬೆಂಬಲಿಗರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡಾ ಮುಲಾಯಂ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ʻಮುಲಾಯಂ ಸಿಂಗ್ ಯಾದವ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಸಾಮಾನ್ಯ ಕುಟುಂಬದಿಂದ ಬಂದ ಮುಲಾಯಂ ಸಿಂಗ್ ಯಾದವ್ ಅವರ ಸಾಧನೆಗಳು ಅಸಾಧಾರಣವಾದವು. ‘ಧರ್ತಿ ಪುತ್ರ’ ಮುಲಾಯಂ ಅವರು ಹಿರಿಯ ನಾಯಕರಾಗಿದ್ದರು. ಎಲ್ಲ ಪಕ್ಷದವರೂ ಅವರನ್ನು ಗೌರವಿಸುತ್ತಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್‌ ಮೂಲಕ ಪ್ರಾರ್ಥಿಸಿದ್ದಾರೆ.

 

ರಾಜಕೀಯದಲ್ಲಿ ಹಗೆತನವಿದ್ದರೂ, ಮುಲಾಯಂ ಸಿಂಗ್ ಅವರು ಉತ್ತಮ ಸಂಬಂಧವನ್ನು ಹೊಂದಿದ್ದರು. ಅವರನ್ನು ಭೇಟಿಯಾದಾಗಲೆಲ್ಲ ಹಲವು ವಿಷಯಗಳ ಬಗ್ಗೆ ಬಹಳ ಮುಕ್ತ ಮನಸ್ಸಿನಿಂದ ಮಾತನಾಡುತ್ತಿದ್ದರು. ಅನೇಕ ಸಂದರ್ಭಗಳಲ್ಲಿ ಅವರೊಂದಿಗಿನ ಸಂವಾದಗಳು ನನ್ನ ನೆನಪಿನಲ್ಲಿ ಸದಾ ಇರುತ್ತವೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪ ಎಂದು ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್ ಟ್ವೀಟ್​ ಮಾಡಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!