ಎಸ್‌ಪಿ ನಾಯಕ ಯಾದವ್ ಕಾರಿಗೆ ಡಿಕ್ಕಿ ಹೊಡೆದು 500 ಮೀಟರ್ ಎಳೆದೊಯ್ದ ಟ್ರಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಅವರ ವಾಹನ ಅಪಘಾತಕ್ಕೀಡಾಗಿದೆ. ಯಾದವ್ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್‌ ಡಿಕ್ಕಿಯಾಗಿದ್ದು, ಸುಮಾರು 500 ಮೀಟರ್‌ಗಳಿಗೂ ಹೆಚ್ಚು ದೂರ ಎಳೆದೊಯ್ದಿದೆ. ಈ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಯಾದವ್, ಪಕ್ಷದ ಕಚೇರಿಯಿಂದ ರಾತ್ರಿ ಮನೆಗೆ ಹಿಂತಿರುಗುವ ವೇಳೆ ಘಟನೆ ಸಂಭವಿಸಿದ್ದು, ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಎಸ್‌ಪಿ ಮೈನ್‌ಪುರಿ ಕಮಲೇಶ್ ದೀಕ್ಷಿತ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!