ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೆನಿಸ್ ಇತಿಹಾಸದ ದಿಗ್ಗಜರಲ್ಲಿ ಒಬ್ಬರಾದ ರಾಫೆಲ್ ನಡಾಲ್ ಅವರು ಕ್ರೀಡೆಯಿಂದ ನಿರ್ಗಮಿಸುವುದಾಗಿ ಘೋಷಿಸಿದ್ದಾರೆ. ಅವರು 22 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದಿರುವ ಅವರು ಟೆನಿಸ್‌ಗೆ ವಿದಾಯ ಹೇಳಿದ್ದಾರೆ.
ಸ್ಪ್ಯಾನಿಷ್ ದಂತಕಥೆ ನಡಾಲ್ ತಮ್ಮ ನಿವೃತ್ತಿಯ ಸುದ್ದಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಮೂಲಕ ಹಂಚಿಕೊಂಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ, ಅವರು ತಮ್ಮ ಅಭಿಮಾನಿಗಳು ಮತ್ತು ಬೆಂಬಲಿಗರಿಗೆ ಧನ್ಯವಾದಗಳನ್ನು ಅರ್ಪಿಸಿದರು
ನವೆಂಬರ್‌ನಲ್ಲಿ ಮಲಗಾದಲ್ಲಿ ನಡೆಯಲಿರುವ ಡೇವಿಸ್ ಕಪ್ ಫೈನಲ್ ಮ್ಯಾಚ್ ನಡಾಲ್ ಅವರ ಕೊನೆಯ ಪಂದ್ಯಾವಳಿಯಾಗಿದೆ. ನವೆಂಬರ್ 19 ರಿಂದ 21 ರವರೆಗೆ ನಡೆಯುವ ಕ್ವಾರ್ಟರ್ ಫೈನಲ್‌ನಲ್ಲಿ ಸ್ಪೇನ್ ನೆದರ್ಲ್ಯಾಂಡ್ಸ್ ಅನ್ನು ಎದುರಿಸಲಿದೆ.