ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸ ದಿಗಂತ ಆನ್ ಡೆಸ್ಕ್:
ಇಂದಿಗೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದೆ. ಈ ಹಿನ್ನೆಲೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸಾಧನಾ ಸಮಾವೇಶ ನಡೆಯುತ್ತಿದೆ.
ಈ ಸಮಾವೇಶಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದಿಯಾಗಿ ಸರ್ಕಾರದ ಸಚಿವರು, ಅಧಿಕಾರಿಗಳು ಭಾಗವಹಿಸಿದ್ದಾರೆ.
ಇನ್ನೊಂದೆಡೆ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಇದೀಗ ಸ್ಪೀಕರ್ ಕಾಗೇರಿ ರಾಜಭವನಕ್ಕೆ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಏಕೆ ಭೇಟಿ ಮಾಡಲು ಎಂಬುದು ನಿಗೂಢವಾಗಿದೆ.
ಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್ ಕಾಗೇರಿ ಹೆಸರು ಕೂಡ ಕೇಳಿ ಬರುತ್ತಿರುವುದರಿಂದ ರಾಜ್ಯಪಾಲರ ಭೇಟಿ ರಾಜಕೀಯ ಅಂಗಗಳದಲ್ಲಿ ಬಹಳ ಕುತೂಹಲ ಮೂಡಿಸಿದೆ.