ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಭಾಧ್ಯಕ್ಷ ಯು.ಟಿ. ಖಾದರ್ ಅಧ್ಯಯನಕ್ಕಾಗಿ ಮಲೇಷಿಯಾ ಪ್ರವಾಸ ಕೈಗೊಂಡಿದ್ದಾರೆ.
ಅಲ್ಲಿ ಅವರು ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಷಿಯೇಷನ್, ಮಲೇಷಿಯಾದ ಜಂಟಿ ಅಧ್ಯಕ್ಷ ಡಾ. ಜೋಹಾರಿ ಬಿನ್ ಅಬ್ದುಲ್ ಅವರನ್ನು ಕೌಲಾಲಂಪುರದ ಸಂಸತ್ ಭವನದಲ್ಲಿ ಭೇಟಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಉಭಯ ನಾಯಕರು ಪ್ರಜಾಪ್ರಭುತ್ವ ತತ್ವಗಳ ಬಗ್ಗೆ ಪರಸ್ಪರ ವಿಚಾರ ವಿನಿಮಯ ಮಾಡಿದರು. ಭವಿಷ್ಯದಲ್ಲಿ ಕರ್ನಾಟಕ ಹಾಗೂ ಮಲೇಷಿಯಾದ ರಾಜಕೀಯ ಸಂಸದೀಯ ವ್ಯವಹಾರಗಳು ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸುವ ಬಗ್ಗೆ ಚರ್ಚೆ ನಡೆಸಿದರು.