Monday, October 13, 2025

ಸ್ಪೀಕರ್ ಯು.ಟಿ. ಖಾದರ್ ಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.

ತನ್ನ 60ನೇ ಘಟಿಕೋತ್ಸವದಲ್ಲಿ ಯುಟಿ ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲು ಬೆಂಗಳೂರು ವಿಶ್ವವಿದ್ಯಾಲಯ ತೀರ್ಮಾನಿಸಿದೆ.

ಖಾದರ್ ಜೊತೆ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್‌ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರಾಗಿದ್ದಾರೆ.

ಅ.8ರಂದು ಪೂರ್ವಾಹ್ನ 11:30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಜರುಗುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ನಡೆಯಲಿದೆ

ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಯಾಗಿರುವ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಸಮಾರಂಭದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಯಾಗಿ ಭಾಗವಹಿಸುವ ಡಿ.ಆ‌ರ್.ಡಿ.ಎಲ್. ನ ನಿವೃತ್ತ ನಿರ್ದೇಶಕ, ಪದ್ಮಶ್ರೀ ಪುರಸ್ಕೃತ ಡಾ.ಪ್ರಹ್ಲಾದ ರಾಮರಾವ್‌ ಘಟಿಕೋತ್ಸವ ಭಾಷಣ ಮಾಡುವರು. ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕ‌ರ್ ಉಪಸ್ಥಿತರಿರುವರು.

error: Content is protected !!