Sunday, October 1, 2023

Latest Posts

ಹಕ್ಕುಗಳ ಜೊತೆಗೆ ಕರ್ತವ್ಯ ಪಾಲನೆ ಮಾಡಲು ವಿಶ್ವೇಶ್ವರ ಹೆಗಡೆ ಕಾಗೇರಿ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಸಂವಿಧಾನದತ್ತವಾದ ಹಕ್ಕುಗಳಿಗೆ ಒತ್ತಾಯಿಸುವುದಕ್ಕಷ್ಟೇ ಸೀಮಿತವಾಗದೆ, ಹಕ್ಕುಗಳ ಜೊತೆಗೆ ನಮ್ಮ ಕರ್ತವ್ಯವನ್ನು ಪಾಲಿಸುವತ್ತಲೂ ಗಮನ ಹರಿಸಬೇಕು ಎಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕರೆ ನೀಡಿದ್ದಾರೆ.

73ನೇ ಗಣರಾಜ್ಯೋತ್ಸವದ ಅಂಗವಾಗಿ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಶಾಸಕರ ಭವನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ, ಗೌರವ ವಂದನೆ ಸಲ್ಲಿಸಿದ ಅವರು, ದೇಶದ ಏಕತೆ, ಸಮಗ್ರತೆ ಮತ್ತು ಸುರಕ್ಷತೆಯ ರಕ್ಷಣೆಯ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದರು.

ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುತ್ತಾ, ಆಡಳಿತದ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಸಾಮಾನ್ಯ ಜನರ ದೈನಂದಿನ ಜೀವನಮಟ್ಟವನ್ನು ಸುಧಾರಿಸಲು ಇದು ಸುಸಮಯವಾಗಿದೆ ಎಂದು ಅಭಿಪ್ರಾಯಪಟ್ಟರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಸರ್ವಸ್ವವನ್ನೂ ತ್ಯಾಗ ಮಾಡಿದ ಸ್ವಾತಂತ್ರ್ಯ ಯೋಧರ ಮತ್ತು ದೇಶಕ್ಕೆ ಸಮಗ್ರ ಸಂವಿಧಾನವನ್ನು ನೀಡುವಲ್ಲಿ ಶ್ರಮಿಸಿದ ಸಂವಿಧಾನ ರಚನಾ ಸಮಿತಿಯ ಸದಸ್ಯರೆಲ್ಲರ ಪ್ರಯತ್ನ ಸ್ಮರಿಸುವ ದಿನ ಇದಾಗಿದೆ ಎಂದು ಹೇಳಿದರು.

ಮೇಲ್ಮನೆ ಮತ್ತು ಕೆಳಮನೆಗಳ ಕಾರ್ಯದರ್ಶಿಗಳು ಮತ್ತು ಇತರ ಉನ್ನತಾಧಿಕಾರಿಗಳು ಮತ್ತು ಸಿಬ್ಬಂದಿ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!