ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ 2000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಇದಕ್ಕೆ ಮುಂಗಡ ಬುಕ್ಕಿಂಗ್ ಕೂಡ ಮಾಡಿಕೊಳ್ಳಬಹುದಾಗಿದೆ.
ಈ ವಿಶೇಷ ಬಸ್‌ಗಳು ಮಾರ್ಚ್ 28, 29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿದ್ದು, ಮುಂಗಡ ಬುಕ್ಕಿಂಗ್‌ಗೆ ಅವಕಾಶವಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟಣೆ ನೀಡಿದ್ದು, ಮಾರ್ಚ್ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್ 31 ರಂದು ರಂಜಾನ್ ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.
ಮಾರ್ಚ್ 30ರಂದು ಚಂದ್ರಮಾನ ಯುಗಾದಿ, ಮಾ.31ರಂದು ರಂಜಾನ್ ಹಬ್ಬವಿರುವುದರಿಂದ ಕರ್ನಾಟಕ ರಸ್ತೆ ಸಾರಿಗೆ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಾ.28 ರಿಂದ ಮಾ.30ರವರೆಗೆ ಬೆಂಗಳೂರಿನಿಂದ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಾಪಸ್ ಆಗುವವರೆಗೆ ಮಾರ್ಚ್ 31ರಂದು ವಿಶೇಷ ಬಸ್ಗಳನ್ನು ಬಿಡಲಾಗಿದೆ.