May 17, 2026
Sunday, May 17, 2026
spot_img

ದೇವೇಗೌಡರಿಗೆ ಸ್ಪೆಷಲ್ ಕಾರು: ಸರ್ಕಾರದಿಂದ ದುಬಾರಿ ವಾಹನ ಖರೀದಿಗೆ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ ದೇವೇಗೌಡ ಅವರಿಗೆ ರಾಜ್ಯ ಸರ್ಕಾರ ವಿಶೇಷ ಕಾರು ಒದಗಿಸಲು ಮುಂದಾಗಿದೆ. ಇದಕ್ಕಾಗಿ ಸುಮಾರು 1.25 ಕೋಟಿ ಮೌಲ್ಯದ ಐಷಾರಾಮಿ ವಾಹನ ಖರೀದಿಗೆ ಅನುಮತಿ ನೀಡಿ ಅಧಿಸೂಚನೆ ಹೊರಡಿಸಲಾಗಿದೆ.

ಸರ್ಕಾರದ ನಿರ್ಧಾರದಂತೆ, Volvo XC90 ಮಾದರಿಯ ಉನ್ನತ ಮಟ್ಟದ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಕಾರನ್ನು ನೀಡಲಾಗುತ್ತಿದೆ. ಈ ವಾಹನವನ್ನು ಬೆಂಗಳೂರಿನ ಖಾಸಗಿ ಡೀಲರ್ ಮೂಲಕ ನೇರವಾಗಿ ಖರೀದಿಸಲು ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇದರ ಗುಣಮಟ್ಟ ಹಾಗೂ ಬೆಲೆಯನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ:

ಈ ಕಾರು 2.0 ಲೀಟರ್ ಟರ್ಬೋ ಎಂಜಿನ್ ಹೊಂದಿದ್ದು, ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಸಹಿತ 250 ಹಾರ್ಸ್ ಪವರ್ ಹಾಗೂ 360 Nm ಟಾರ್ಕ್ ಸಾಮರ್ಥ್ಯ ನೀಡುತ್ತದೆ. ಆರಾಮದಾಯಕ ಪ್ರಯಾಣ ಮತ್ತು ಹೆಚ್ಚಿನ ಭದ್ರತೆ ನೀಡುವ ಉದ್ದೇಶದಿಂದ ಈ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.

ಹೆಚ್.ಡಿ ದೇವೇಗೌಡರ ವಯಸ್ಸು ಮತ್ತು ಆರೋಗ್ಯದ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು, ಕಾರಿನಲ್ಲಿ ಏರು-ಇಳಿಯಲು ಹಾಗೂ ಕುಳಿತುಕೊಳ್ಳಲು ಅನುಕೂಲವಾಗುವಂತೆ ಕೆಲವು ತಿದ್ದುಪಡಿ ಮಾಡುವ ಸಾಧ್ಯತೆ ಇದೆ. ಸರ್ಕಾರದ ಈ ನಿರ್ಧಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !