ಗಣಿಧಣಿಗೆ ಬಿಗ್ ಶಾಕ್: ಜನಾರ್ದನ ರೆಡ್ಡಿ ದಂಪತಿ ಒಡೆತನದ ಆಸ್ತಿ ಜಪ್ತಿಗೆ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿ ಅವರ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ. ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶಿಸಿದೆ.

ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!