ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ತೆರಳಿ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇಂದು ಬೆಟ್ಟಕ್ಕೆ ತೆರಳಿದ ಡಿಸಿಎಂ ಈಡುಗಾಯಿ ಒಡೆದು ಪ್ರಾರ್ಥಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಒಳ್ಳೆಯದು ಮಾಡು ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದ್ದಾರೆ.
ಈ ಬಾರಿ ಇಡೀ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿದೆ. ಎಲ್ಲರಿಗೂ ಒಳ್ಳೆಯದನ್ನು ಮಾಡಲೆಂದು ಪ್ರಾರ್ಥನೆ ಮಾಡಿದ್ದೇನೆ. ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.