ಸಮಾಜಘಾತಕ ಶಕ್ತಿಗಳನ್ನು ಪತ್ತೆಹಚ್ಚಲು ವಿಶೇಷ ಪಡೆ ರಚನೆ ಅಗತ್ಯ : ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆಗೆ ಒಂದು ವಿಶೇಷ ಪಡೆಯ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅಕ್ಕಿಲೂರಿನ ಎನ್.ಡಿ.ಪಿ.ಯು. ಕಾಲೇಜ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿ, ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಂಗಳೂರಿನಲ್ಲಿ ಫಾಜಿಲ್ ಹತ್ಯೆಯಾದಾಗ ಸರ್ಕಾರ 25 ಲಕ್ಷ ರೂ.ಗಳ ಪರಿಹಾರ ನೀಡಿತ್ತು. ಅದೇ ಪರಿಹಾರದ ಹಣದಲ್ಲಿ ಅವರ ಸಹೋದರ ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದು, ಸರ್ಕಾರದ ಹಣ ದುರ್ಬಳಕೆಯಾಗಿದೆಯೇ ಎಂಬ ಸುದ್ದಿಗಾರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಈ ಬಗ್ಗೆ ನನಗೆ ತಿಳಿದಿಲ್ಲ. ನಿನ್ನೆ ಸಚಿವ ದಿನೇಶ್ ಗುಂಡೂರಾವ್ ಹಾಗು ಗೃಹ ಸಚಿವ ಜಿ.ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿ ಪ್ರತಿಕ್ರಿಯಿಸುವುದಾಗಿ ತಿಳಿಸಿದರು.

ಜಾತಿಗಣತಿ: ಶಂಖದಿಂದ ಬಂದರೆ ಮಾತ್ರ ತೀರ್ಥವೇ
ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕಿಸಿದ್ದರು. ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ. ಶಂಖದಿಂದ ಬಂದರೆ ಮಾತ್ರ ತೀರ್ಥ ಎಂಬಂತಾಗಿದೆ. ಮೊದಲು ರಾಜಕೀಯವಾಗಿ ಹೇಳುತ್ತಿದ್ದರು. ವಾಸ್ತವಿಕತೆಯ ಆಧಾರದ ಮೇಲೆ ಹೇಳುತ್ತಿರಲಿಲ್ಲ ಎಂದು ಈಗ ಅರ್ಥವಾಗುತ್ತದೆ ಅಲ್ಲವೇ ? ಎಂದು ಸಿಎಂ ಪ್ರಶ್ನಿಸಿದರು.

ದೇವೇಗೌಡರದ್ದು ಇಬ್ಬಗೆಯ ನೀತಿ
ಪಾಕಿಸ್ತಾನದ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಗೆಯ ನೀತಿ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿಕೆಗೆ ಪ್ರತಿಕ್ರಿಯಿಸಿ ದೇವೇಗೌಡರು ಬಿಜೆಪಿ ಸೇರುವ ಮುನ್ನ ನರೇಂದ್ರ ಮೋದಿಯವರ ಬಗ್ಗೆ ಏನು ಮಾತನಾಡುತ್ತಿದ್ದರು, ಈಗ ಏನು ಮಾತನಾಡುತ್ತಿದ್ದಾರೆ? ಇಬ್ಬಗೆಯ ನೀತಿ ದೇವೇಗೌಡರಿಗೆ ಇದೆ  ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!