ಬಿಜೆಪಿಯಿಂದ ಓಬಿಸಿ ಸಮುದಾಯಗಳಿಗೆ ವಿಶೇಷ ಪ್ರೋತ್ಸಾಹ: ನರೇಂದ್ರ ಬಾಬು

ಹೊಸದಿಗಂತ ವರದಿ, ಕಲಬುರಗಿ:

ದೇಶದಲ್ಲಿರುವ 6000 ಕ್ಕಿಂತ ಅಧಿಕ ಸಣ್ಣ ಸಣ್ಣ ಸಮುದಾಯಗಳಿಗೆ ಬಿಜೆಪಿ ಪ್ರೋತ್ಸಾಹ ನೀಡುವ ಕೆಲಸ ಮಾಡುತ್ತಿದೆ ಎಂದು ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು ಹೇಳಿದರು.

ಅವರು ಶನಿವಾರ ನಗರದ ಗ್ರ್ಯಾಂಡ್ ಹೋಟೆಲ್ನಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿ, ಹಿಂದೂಳಿದ ವಗ೯ಗಳ ಐತಿಹಾಸಿಕ ಸಮಾವೇಶದಲ್ಲಿ ರಾಜ್ಯದ 312 ಮಂಡಲಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದು ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕೀ ಮತದಾರರು, ಪದಾಧಿಕಾರಿಗಳೂ ಆಗಮಿಸಲಿದ್ದಾರೆ ಎಂದರು.

ಕೇಂದ್ರ- ರಾಜ್ಯ ಸರಕಾರಗಳು ಒಬಿಸಿ ಸಮುದಾಯದ ಅಭಿವೃದ್ಧಿಗೆ ಕೈಗೊಂಡ ಯೋಜನೆಗಳು ಸಾಕಷ್ಟು ಲಾಭದಾಯಕವಾಗಿವೆ.ಹಲವು ಸಣ್ಣ ಸಮುದಾಯಗಳನ್ನು ಮೂಲ ವಾಹಿನಿಯಲ್ಲಿ ತರಲು ಬಿಜೆಪಿ ಸಕಾ೯ರ ಶ್ರಮಿಸುತ್ತಿದೆ ಎಂದ ಅವರು, ಯೋಜನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮಾತನಾಡಿ, ಕಲಬುರಗಿ,ಲಿ ಇತಿಹಾಸ ನಿರ್ಮಿಸುವ ಸಮಾವೇಶ ನಡೆಯಲಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವವಂದ್ಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಅವರ ನಿರ್ಧಾರಗಳು ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದರು.

ಕರ್ನಾಟಕದಲ್ಲಿ ಹಿಂದುಳಿದ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತಿದ್ದಾರೆ. ಸಮಾವೇಶದ ಕಾರಣ ಇಡೀ ಕಲ್ಯಾಣ ಕರ್ನಾಟಕ ಕೇಸರಿಮಯ ಆಗುತ್ತಿದೆ. ಇಲ್ಲಿ ಗರಿಷ್ಠ ಬಿಜೆಪಿ ಶಾಸಕರು ಆಯ್ಕೆ ಆಗಲಿದ್ದಾರೆ ಎಂದು ತಿಳಿಸಿದರು. ಕೋಲಿ ಸಮುದಾಯವನ್ನು ಎಸ್‍ಟಿಗೆ ಸೇರಿಸಲು ಪ್ರಯತ್ನ ನಡೆದಿದೆ ಎಂದು ವಿವರಿಸಿದರು.

ಮಲ್ಲಿಕಾರ್ಜುನ ಖರ್ಗೆಯವರು ನಮ್ಮ ಕೋಲಿ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಟೀಕಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಮುಖ್ಯ ವಕ್ತಾರ ಎಂ.ಜಿ.ಮಹೇಶ್, ಮಾಜಿ ಶಾಸಕ ಅಮರನಾಥ ಪಾಟೀಲ್, ಕಲ್ಬುರ್ಗಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಎಸ್. ಪಾಟೀಲ್, ಇತರ ಮುಖಂಡರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!