ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ 5 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗಡುವನ್ನು ಒಂದು ವಾರಗಳ ಕಾಲ ವಿಸ್ತರಿಸಿದೆ.
ಈ ವಿಸ್ತರಣೆಯು ತಮಿಳುನಾಡು, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಅನ್ವಯಿಸುತ್ತದೆ. ಆದರೆ, ಈ ನಿರ್ಧಾರ ಪಶ್ಚಿಮ ಬಂಗಾಳಕ್ಕೆ ಅನ್ವಯವಾಗುವುದಿಲ್ಲ.
ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ತಮಿಳುನಾಡು ಮತ್ತು ಗುಜರಾತ್ ರಾಜ್ಯಗಳಿಗೆ ಡಿಸೆಂಬರ್ 14ರಂದು ಗಡುವು ವಿಧಿಸಲಾಗಿತ್ತು. ಆದರೆ, ಇದೀಗ ಆ ಗಡುವನ್ನು ಡಿಸೆಂಬರ್ 19ರವೆರೆಗ ವಿಸ್ತರಿಸಲಾಗಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಎಸ್ಐಆರ್ ಸಲ್ಲಿಕೆಯ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದ್ದು, ಹೊಸ ಸಲ್ಲಿಕೆ ದಿನಾಂಕವನ್ನು ಡಿಸೆಂಬರ್ 23ಕ್ಕೆ ನಿಗದಿಪಡಿಸಲಾಗಿದೆ.
ಈ ಹಿಂದೆ, ಚುನಾವಣಾ ಆಯೋಗವು ಕೇರಳಕ್ಕೆ ಡಿಸೆಂಬರ್ 11ರಿಂದ ಡಿಸೆಂಬರ್ 18ರವರೆಗೆ ಗಡುವನ್ನು ವಿಸ್ತರಿಸಿತ್ತು. ಉತ್ತರ ಪ್ರದೇಶದಲ್ಲಿ ಇಲ್ಲಿಯವರೆಗೆ ಶೇ. 90ಕ್ಕೂ ಹೆಚ್ಚು ಫಾರ್ಮ್‌ಗಳನ್ನು ವಿತರಿಸಲಾಗಿದೆ. ಇದಲ್ಲದೆ, ಶೇ. 80ರಷ್ಟು ಮತದಾರರು ಈಗಾಗಲೇ ತಮ್ಮ ಫಾರ್ಮ್‌ಗಳನ್ನು ಪೂರ್ಣಗೊಳಿಸಿ ಸಲ್ಲಿಸಿದ್ದಾರೆ.

