February 28, 2026
Saturday, February 28, 2026
spot_img

ಬಂಗಾಳದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: 63 ಲಕ್ಷ ಮಂದಿಗೆ ಕೊಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದೆ.

ಈ ಕುರಿತು ಮಾಹಿತಿ ನೀಡಿದ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಅಗರ್ವಾಲ್ , ಅಂತಿಮ ಪಟ್ಟಿಯಲ್ಲಿ 63 ಲಕ್ಷ ಮತದಾರರನ್ನು ಅಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಎಸ್‌ಐಆರ್‌ನ ಎರಡನೇ ಹಂತದ ನಂತರ, ಪಶ್ಚಿಮ ಬಂಗಾಳದಲ್ಲಿ ಈಗ 7,04,59,284 ಮತದಾರರಿದ್ದಾರೆ. ಫಾರ್ಮ್ 6 ಮತ್ತು 6 ಎ ಅಡಿಯಲ್ಲಿ 1,82,036 ಮತದಾರರನ್ನು ಮತ್ತು ಫಾರ್ಮ್ 8 ಅಡಿಯಲ್ಲಿ 6,671 ಮತದಾರರನ್ನು ಪಟ್ಟಿಗೆ ಸೇರಿಸಲಾಗಿದೆ. ಆಯೋಗವು ಪಶ್ಚಿಮ ಬಂಗಾಳದಾದ್ಯಂತ ಸುಮಾರು 6.4 ಕೋಟಿ ಮತದಾರರನ್ನು ಅನುಮೋದಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !