ನಡು ರಸ್ತೆಯಲ್ಲಿ ವಿಶೇಷ ಕಾರ್ಯಾಚರಣೆ: ಪಾನಪ್ರಿಯ ಬಸ್ ಚಾಲಕರ ‘ನಶೆ’ ಇಳಿಸಿದ ಪೊಲೀಸರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾತ್ರಿ ವೇಳೆ ದಿಢೀರ್ ಕಾರ್ಯಾಚರಣೆ ಕೈಗೆತ್ತಿಕೊಂಡ ಸಂಚಾರ ಪೊಲೀಸರು ಮದ್ಯ ಸೇವಿಸಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕರುಗಳಿಗೆ ಸಖತ್ ಬಿಸಿ ಮುಟ್ಟಿಸಿದ್ದಾರೆ.

ರಾತ್ರಿ 8 ರಿಂದ 11.30 ರವರೆಗೆ ನಡೆಸಲಾದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 881 ಬಸ್‌ಗಳನ್ನು ತಪಾಸಣೆ ಮಾಡಲಾಗಿದ್ದು, ಈ ಪೈಕಿ ಒಂಭತ್ತು ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಚಾಲಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು ಚಾಲನಾ ಪರವಾನಿಗೆಯನ್ನು ಅಮಾನತುಗೊಳಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಕಳುಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!