ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಅಮವಾಸ್ಯೆಯ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ನೆರವೇರಿಸಿದರು. ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಸ್ವಾಮೀಜಿಗಳು ಹಾಗೂ ಸಹಸ್ರಾರು ಭಕ್ತರು ಪೂಜೆ ಯಲ್ಲಿ ಭಾಗವಹಿಸಿದ್ದರು.
ಸ್ವಾಮಿಗೆ ತಹರೇವಾರಿ ಹೂಗಳಿಂದ ಅಲಂಕಾರ ಮಾಡಲಾಗಿತ್ತು, ಬಗೆಬಗೆಯ ಹಣ್ಣು ಹಾಗೂ ಖಾದ್ಯದಿಂದ ಹಾರ ತಯಾರಿಸಿ ಕಾಲಭೈರವೇಶ್ವರನಿಗೆ ಅರ್ಪಿಸಲಾಗಿದೆ. ಬಂಗಾರದ ಕವಚದಿಂದ ಸ್ವಾಮಿಯನ್ನು ಸಿಂಗಾರ ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಮಠಕ್ಕೆ ಭೇಟಿ ನೀಡಿದ್ದರು.