June 15, 2026
Monday, June 15, 2026
spot_img

ದುಷ್ಟಶಕ್ತಿಗಳಿಂದ ರಕ್ಷಣೆ ಸಿಗಲಿ: ತಿರುನಲ್ಲಾರ್ ದೇಗುಲದಲ್ಲಿ ಡಿಕೆಶಿ ವಿಶೇಷ ಪ್ರಾರ್ಥನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಕೀಯ ಬೆಳವಣಿಗೆಗಳ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮಿಳುನಾಡಿನ ಪ್ರಸಿದ್ಧ ತಿರುನಲ್ಲಾರ್ ಶನೇಶ್ವರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇಶ, ರಾಜ್ಯದ ಒಳಿತಿಗಾಗಿ ಹಾಗೂ ದುಷ್ಟಶಕ್ತಿಗಳಿಂದ ರಕ್ಷಣೆ ಸಿಗಲೆಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಅವರು ಹೇಳಿದರು.

ದೇಗುಲ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸಮಯದಲ್ಲಿ ದೇವರ ಆಶೀರ್ವಾದ ಪಡೆಯುವುದು ಅಗತ್ಯವೆನಿಸಿತು. ಶಾಂತಿ, ಸಮೃದ್ಧಿ ಮತ್ತು ಉತ್ತಮ ಬೆಳವಣಿಗೆಗಾಗಿ ಬೇಡಿಕೊಂಡಿದ್ದೇನೆ ಎಂದು ತಿಳಿಸಿದರು. ಇದೇ ವೇಳೆ ರಾಜಕೀಯ ಬೆಳವಣಿಗೆ, ಟಿವಿಕೆ ಜೊತೆಗಿನ ಮೈತ್ರಿ ಬಗ್ಗೆ ಕೇಳಿದ ಪ್ರಶ್ನೆಗೆ, ಜಾತ್ಯಾತೀತ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ತನ್ನ ನಿಲುವಿನಲ್ಲಿ ದೃಢವಾಗಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:

ಇನ್ನೊಂದೆಡೆ ತಮಿಳುನಾಡಿನ ರಾಜಕೀಯದಲ್ಲಿ ಹಲವು ದಿನಗಳಿಂದ ಮುಂದುವರಿದಿದ್ದ ಗೊಂದಲಕ್ಕೆ ತೆರೆ ಬೀಳುವ ಲಕ್ಷಣಗಳು ಕಾಣಿಸಿಕೊಂಡಿವೆ. ವಿಸಿಕೆ ಪಕ್ಷ ಬೆಂಬಲ ಘೋಷಿಸಿದ ಬೆನ್ನಲ್ಲೇ ವಿಜಯ್ ನೇತೃತ್ವದ ಮೈತ್ರಿಗೆ ಅಗತ್ಯ ಸಂಖ್ಯಾಬಲ ಲಭಿಸಿದೆ.

ಈಗಾಗಲೇ ಕಾಂಗ್ರೆಸ್ ಹಾಗೂ ಎಡಪಂಥೀಯರ ಬೆಂಬಲ ಹೊಂದಿದ್ದ ಮೈತ್ರಿಗೆ ವಿಸಿಕೆ ಮತ್ತು ಐಯುಎಂಎಲ್ ಶಾಸಕರ ಬೆಂಬಲವೂ ಸೇರಿದ್ದು, ಒಟ್ಟು ಬಲ 120ಕ್ಕೆ ಏರಿಕೆಯಾಗಿದೆ. ಇದರಿಂದ ಸರ್ಕಾರ ರಚನೆಗೆ ದಾರಿ ಸುಗಮವಾಗಿದ್ದು, ವಿಜಯ್ ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !