ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ರಾಜ್ಯ ರಾಜಧಾನಿಯಲ್ಲಿ ಐತಿಹಾಸಿಕ ‘ಬೆಂಗಳೂರು ಕಡಲೆಕಾಯಿ ಪರಿಷೆ’ ಆರಂಭವಾಗಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬ್ಯೂಗಲ್ ರಾಕ್ ಉದ್ಯಾನವನದಲ್ಲಿ ಸಂಜೆ 6ರಿಂದ ಶ್ರೀಧರ್ ಸಾಗರ ಅವರಿಂದ ಸ್ಯಾಕ್ಸೋಫೋನ್ ಕಾರ್ಯಕ್ರಮ ನಡೆಯಲಿದ್ದು, ಸೋಮವಾರ ಸಂಜೆ 6ರಿಂದ ರಂಗಲಕ್ಷ್ಮೀ ಶ್ರೀನಿವಾಸ್ ಅವರಿಂದ ಬೀದಿ ನಾಟಕ ನಡೆಯಲಿದೆ. ಅಂದು ನರಸಿಂಹಸ್ವಾಮಿ ಉದ್ಯಾನವನದಲ್ಲಿ ಸಂಜೆ 6ರಿಂದ ವೀಣಾ ಮುರಳಿಧರ್ ಅವರ ತಂಡದಿಂದ ಭರತನಾಟ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನ.22 ರಂದು ವಿಜಯ ವಿಠ್ಠಲ ಶಾಲೆಯ ವತಿಯಿಂದ ವೈವಿಧ್ಯಮಯ ಸಾಂಸ್ಕೃತಿಕ ಸಂಜೆ ಸಹಿತ ವಿವಿಧ ಕಾರ್ಯಕ್ರಮ ಜರುಗಲಿದೆ.