ಪಂಚಮಸಾಲಿ ಸಮದಾಯಕ್ಕೆವಿಶೇಷ ಮೀಸಲಾತಿ: ಹೈಕೋರ್ಟ್‌ ನಿಂದ ತಡೆಯಾಜ್ಞೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪಂಚಮಸಾಲಿ ಸಮದಾಯಕ್ಕೆ ಪ್ರವರ್ಗ ೨ಡಿ, ಒಕ್ಕಲಿಗರಿಗೆ ೨ಸಿ ಎಂಬ ವಿಶೇಷ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮಾಡಿರುವ ಪ್ರಸ್ತಾವನೆಗಳಿಗೆ ರಾಜ್ಯ ಹೈಕೋರ್ಟ್‌ ತಡೆಯಾಜ್ಞೆ ನೀಡಿದ್ದು ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿದೆ.

ಕಳೆದ ಡಿಸೆಂಬರ್‌ ೨೯ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಕ್ಕಲಿಗರಿಗೆ ೨ಸಿ, ಪಂಚಮಸಾಲಿ ಸಮುದಾಯಕ್ಕೆ ೨ಡಿ ಎಂಬ ಹೊಸ ಪ್ರವರ್ಗ ರಚಿಸಿ ಮೀಸಲಾತಿ ನೀಡುವ ನಿರ್ಧಾರ ಮಾಡಲಾಗಿತ್ತು. ಕೇಂದ್ರ ಸರಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಕ್ಕೆ ನೀಡಿದ್ದ ಶೇಕಡಾ ೧೦ ಮೀಸಲಾತಿಯಲ್ಲಿ ಈ ವರ್ಗಗಳಿಗೆ ಪಾಲು ನೀಡಲು ನಿರ್ಧರಿಸಿತ್ತು.

ನಿರ್ಧಾರ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ರಾಘವೇಂದ್ರ ಡಿ.ಜಿ. ಎಂಬವರು ಸಾರ್ವಜನಿಕ ಹಿತಾಸಕ್ತಿ ದಾವೆ ಸಲ್ಲಿಸಿದ್ದರು. ಗುರುವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಪೀಠ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ. ಮುಂದಿನ ಮುಂದಿನ ವಿಚಾರಣೆಯನ್ನು ಜ.30ಕ್ಕೆ ಮುಂದೂಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!