September 30, 2026
Wednesday, September 30, 2026
spot_img

ದೆಹಲಿ ಭೇಟಿಯಲ್ಲಿ ಡಿ.ಕೆ. ಶಿವಕುಮಾರ್‌ಗೆ ವಿಶೇಷ ಭದ್ರತೆ: ಅಧಿಕಾರಿಗಳೊಂದಿಗೆ ಕಾರ್ಯತಂತ್ರ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿರುವ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಈ ಬಾರಿ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಿರುವುದು ಗಮನ ಸೆಳೆದಿದೆ. ಜೊತೆಗೆ ರಾಜ್ಯದ ಜಲ ವಿವಾದಗಳು ಹಾಗೂ ಮುಂದಿನ ಕಾರ್ಯತಂತ್ರದ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಸಭೆಯನ್ನೂ ನಡೆಸಿದ್ದಾರೆ.

ವಿಶೇಷ ಭದ್ರತೆಯಲ್ಲಿ ಸಿಎಂ ಸಂಚಾರ

ಮುಖ್ಯಮಂತ್ರಿಯವರ ಭದ್ರತೆಗಾಗಿ ಬೆಂಗಳೂರಿನಿಂದ ವಿಶೇಷ ಪೊಲೀಸ್ ತಂಡವನ್ನು ನಿಯೋಜಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ರೂಪಿಸಲಾಗಿದ್ದು, ದೆಹಲಿಯಲ್ಲಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಕಟ್ಟುನಿಟ್ಟಿನ ಭದ್ರತೆ ಒದಗಿಸಲಾಗಿದೆ.

ಕರ್ನಾಟಕ ಭವನದಲ್ಲಿ ಮಹತ್ವದ ಸಭೆ

ಸಂಸದರ ಸಭೆಗೆ ಮುನ್ನ ದೆಹಲಿ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ರಾಜ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳು ಹಾಗೂ ಕೇಂದ್ರದ ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

Must Read