ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಹೊಸ ಫೋಟೊ ವೈರಲ್ ಆಗಿದೆ. ಜೈಲು ರೆಸಾರ್ಟ್ ಎನ್ನುವಂತೆ ಕೈಯಲ್ಲಿ ಸಿಗರೇಟ್ ಹಾಗೂ ಕಾಫಿ ಲೋಟ ಹಿಡಿದುಕೊಂಡಿದ್ದ ದರ್ಶನ್ ಫೋಟೊ ವೈರಲ್ ಆದ ಬೆನ್ನಲ್ಲೇ ಸರ್ಕಾರ ಏಳು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ.
ದರ್ಶನ್ ವಿಡಿಯೋ ಕಾಲ್‌ನ ಮೂಲಕ ಮಾತನಾಡಿದ ಫೋಟೊ ಕೂಡ ವೈರಲ್ ಆಗಿತ್ತು. ಈ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿದ್ದು, ಜೈಲಿನ ಏಳು ಅಧಿಕಾರಿಗಳನ್ನು ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
‘ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ. ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್ಫಾರ್ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಖಾನೆಗಳಲ್ಲಿ ಸಿಸಿಟಿವಿ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ’ ಎಂದು ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ.
ಮೇಲಧಿಕಾರಿಗಳು ಇದರಲ್ಲಿ ಇನ್‌ವೋಲ್ವ್ ಆಗಿದ್ದರೆ ಅವರಿಗೂ ಕೂಡ ಶಿಕ್ಷೆ ಇದೆ, ಇನ್ನು ದರ್ಶನ್ ಜೈಲಿನ ಊಟವನ್ನೆ ತಿಂತಿದ್ದಾರೆ, ಯಾವ ಬಿರಿಯಾನಿ ಕೂಡ ತಂದುಕೊಟ್ಟಿಲ್ಲ ಎಂದು ಹೇಳಿದ್ದಾರೆ. ಇದರ ಜೊತೆಗೆ ಜೈಲಿನಲ್ಲಿ ಜಾಮರ್ ಹಾಕಿ ಹೈ ಫ್ರೀಕ್ವೆನ್ಸಿ ಇಡಲಾಗಿತ್ತು. ಇದರಿಂದ ಪಕ್ಕದ ಏರಿಯಾಗಳಿಗೆ ತೊಂದರೆ ಆಗಿತ್ತು. ಹೀಗಾಗಿ, ಸದ್ಯ ಪ್ರೀಕ್ವೆನ್ಸಿ ಕಡಿಮೆ ಮಾಡಲಾಗಿದೆ. ‘ಫೋಟೋ ಯಾರು ತೆಗೆದರು? ಯಾರ ಮೊಬೈಲ್ನಲ್ಲಿ ತೆಗದಿದ್ದಾರೆ ಅನ್ನೋದು ಮುಖ್ಯ ಆಗುತ್ತದೆ’ ಎಂದು ಪರಮೇಶ್ವರ್ ಹೇಳಿದ್ದಾರೆ.