September 3, 2026
Thursday, September 3, 2026
spot_img

ಸೆಪ್ಟೆಂಬರ್ 21ರಿಂದ 23ರವರೆಗೆ ರಾಜ್ಯದಲ್ಲಿ ವಿಶೇಷ ಅಧಿವೇಶನ: ಯಾಕೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೆಪ್ಟೆಂಬರ್ 21ರಿಂದ 23ರವರೆಗೆ ರಾಜ್ಯದಲ್ಲಿ ವಿಶೇಷ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ. ಆದರೆ ಈ ವಿಶೇಷ ಅಧಿವೇಶನದಲ್ಲಿ ಕೇವಲ ವಿಷಯಗಳು ಮಾತ್ರ ಚರ್ಚೆಗೊಳ್ಳಲಿವೆ ಎನ್ನಲಾಗಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಶೇಷ ಅಧಿವೇಶನ ನಡೆಸುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಎರಡು ವಿಷಯಗಳ ಚರ್ಚೆ

ರೈತರ ಸಂಕಷ್ಟ, ಬರ ಪರಿಸ್ಥಿತಿ ಮತ್ತು ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಅಧಿವೇಶನ ಕರೆಯಲಾಗುತ್ತಿದೆ. ಈ ಎರಡು ವಿಷಯಗಳಿಗೆ ಮಾತ್ರ ಅಧಿವೇಶನ ಸೀಮಿತವಾಗಿರಲಿದ್ದು, ಪ್ರಶ್ನೋತ್ತರ ಅವಧಿ ಇರುವುದಿಲ್ಲ ಎಂದು ಪರಮೇಶ್ವರ್ ತಿಳಿಸಿದ್ದಾರೆ. ಜೊತೆಗೆ ರಾಜ್ಯದಲ್ಲಿ ಹೊಸ ಜಾಗತಿಕ ಹೂಡಿಕೆ ಮತ್ತು ವಿದೇಶಾಂಗ ವ್ಯವಹಾರಗಳ ಇಲಾಖೆ ಸ್ಥಾಪನೆಗೆ ತೀರ್ಮಾನಿಸಲಾಗಿದೆ ಎಂದರು.

ಇದನ್ನೂ ಓದಿ:

ಒಟ್ಟಾರೆ, ರೈತರ ಸಮಸ್ಯೆಗಳು ಮತ್ತು ಕಸ್ತೂರಿ ರಂಗನ್ ವರದಿ ಕುರಿತು ನಡೆಯಲಿರುವ ವಿಶೇಷ ಅಧಿವೇಶನ ಕೂಡ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವಿನ ಪ್ರಮುಖ ಚರ್ಚೆಗೆ ವೇದಿಕೆಯಾಗಲಿದೆ ಎಂದರೂ ತಪ್ಪಾಗಲಾರದು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !