ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭ: ಸೆ. 17ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೆಪ್ಟೆಂಬರ್ 18 ರಿಂದ ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭವಾಗುತ್ತಿದ್ದು, ಈ ಹಿನ್ನೆಲೆ ಒಂದು ದಿನ ಮೊದಲು ಸೆಪ್ಟೆಂಬರ್ 17 ರಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಈ ಘೋಷಣೆ ಮಾಡಿದ್ದು, ಸಭೆಯಲ್ಲಿ ಭಾಗವಹಿಸಲು ಎಲ್ಲಾ ವಿರೋಧ ಪಕ್ಷಗಳ ನಾಯಕರಿಗೆ ಇ-ಮೇಲ್ ಮೂಲಕ ಆಹ್ವಾನಗಳನ್ನು ಕಳುಹಿಸಲಾಗಿದೆ ಎಂದು ಹೇಳಿದರು.

ಸೆಪ್ಟೆಂಬರ್ 18 ರಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಪೂರ್ವಭಾವಿಯಾಗಿ ದಿನಾಂಕ 17 ರಂದು ಸಂಜೆ 4.30 ಕ್ಕೆ ಸರ್ವ ಪಕ್ಷಗಳ ನಾಯಕರ ಸಭೆಯನ್ನು ಕರೆಯಲಾಗಿದೆ. ಎಲ್ಲಾ ನಾಯಕರಿಗೂ ಈ ಕುರಿತು ಈ-ಮೇಲ್ ಮೂಲಕ ಮಾಹಿತಿ ನೀಡಿ, ಆಮಂತ್ರಣ ನೀಡಲಾಗಿದೆ ಎಂದು ಜೋಶಿ ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!