ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋಮವಾರದಿಂದ ಐದು ದಿನಗಳ ಕಾಲ ನಡೆಯಲಿರುವ ಸಂಸತ್‌ನ ವಿಶೇಷ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆ ತಪ್ಪದೇ ಹಾಜರಿರುವಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮ ಸಂಸದರಿಗೆ ವಿಪ್ ನೀಡಿವೆ.
ಅಧಿವೇಶನದ ತಾತ್ಕಾಲಿಕ ಕಾರ್ಯಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬೆನ್ನಲ್ಲೇ, ಎರಡೂ ಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆಯ ತನ್ನ ಸದಸ್ಯರಿಗೆ ವಿಪ್ ನೀಡಿವೆ.
ಸಂಸತ್‌ನ 75 ವರ್ಷಗಳ ಪಯಣ ಕುರಿತು ಸೆ.18ರಂದು ಸಂಸತ್‌ನ ಉಭಯ ಸದನಗಳಲ್ಲಿ ಚರ್ಚೆ ನಡೆಯಲಿದ್ದು, ಪಕ್ಷದ ಎಲ್ಲ ಸಂಸದರು ಹಾಜರಿರಬೇಕು ಎಂದು ಬಿಜೆಪಿ ಸೂಚಿಸಿದೆ.