ಜೂನ್‌ 24 ರಿಂದ ಸಂಸತ್‌ ವಿಶೇಷ ಅಧಿವೇಶನ: ಆಯ್ಕೆಯಾಗಲಿದ್ದಾರೆ ಲೋಕಸಭೆಯ ನೂತನ ಸ್ಪೀಕರ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಎನ್‌ಡಿಎ ಮೈತ್ರಕೂಟವು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ 71 ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ.

ಇದೀಗ ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್ ವಿಶೇಷ ಅಧಿವೇಶನ ಕರೆಯಲಾಗಿದೆ. ವಿಶೇಷ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಆಯ್ಕೆ ಸೇರಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ ಆರಂಭವಾಗುತ್ತದೆ. ಜೂನ್‌ 24 ಹಾಗೂ ಜೂನ್‌ 25ರಂದು ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್‌ 26ರಂದು ಲೋಕಸಭೆ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟು 8 ದಿನಗಳವರೆಗೆ ವಿಶೇಷ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!