ಕೋಮು ಸಂಘರ್ಷ ತಡೆಗೆ ಬಂತು ವಿಶೇಷ ಕಾರ್ಯಪಡೆ: ಮಂಗಳೂರಿನಲ್ಲಿ ಚಾಲನೆ ನೀಡಿದ ಗೃಹ ಸಚಿವ ಪರಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಮು ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿಶೇಷ ಕಾರ್ಯಪಡೆಯನ್ನು ಸರ್ಕಾರವು ರಚನೆ ಮಾಡಿದೆ.

ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಕಾರ್ಯಪಡೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರಿದ್ದರು.

ಬಳಿಕ ಮಾತನಾಡಿದ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಪಡೆ ಕಾರ್ಯಾಚರಣೆ ಮಾಡಲಿದೆ. ಡಿಐಜಿ ದರ್ಜೆ ಅಧಿಕಾರಿ ನೇತೃತ್ವದಲ್ಲಿ ಈ ತಂಡ ಕಾರ್ಯ ನಿರ್ವಹಿಸಲಿದ್ದು, 248 ಸಿಬ್ಬಂದಿ ಒಳಗೊಂಡ ಮೂರು ಕಂಪನಿ ಕಾರ್ಯಾಚರಣೆಗೆ ಸಿದ್ಧವಾಗಿದೆ. ಪ್ರತಿ ಕಂಪನಿಯಲ್ಲಿ 80 ಸಿಬ್ಬಂದಿ ಇರಲಿದ್ದಾರೆ ಎಂದು ಹೇಳಿದರು. ಡಿಐಜಿ, ಡಿವೈಎಸ್ಪಿ, ಸಹಾಯಕ ಕಮಾಂಡೆಂಟ್, 4 ಇನ್ ಸ್ಪೆಕ್ಟರ್, 16 ಪಿಎಸ್ಐ ಸೇರಿದಂತೆ ಒಟ್ಟು 248 ಸಿಬ್ಬಂದಿ ತಂಡದಲ್ಲಿದ್ದಾರೆ. ಈ ತಂಡ ಸಂಭಾವ್ಯ ಕೋಮು ಹಿಂಸಾಚಾರ, ಕೋಮು ಗಲಭೆಯ ಸಂಚು, ಮೂಲಭೂತವಾದಿ ಚಟುವಟಿಕೆ ನಿಗ್ರಹ ಸೇರಿದಂತೆ ಗುಪ್ತ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಇದ್ದರೆ ರಾಜ್ಯದಲ್ಲಿ ಶಾಂತಿ ಇರುತ್ತದೆ. ಈ ಕಾರ್ಯಪಡೆ ಕೆಲಸಕ್ಕೆ ಜಿಲ್ಲೆಯ ಜನರು ಸಹಕಾರ ನೀಡಬೇಕು. ಅಗತ್ಯವಿದ್ದರೆ ಇಡೀ ರಾಜ್ಯದಲ್ಲಿ ಈ ಕಾರ್ಯಪಡೆ ಸ್ಥಾಪನೆ ಮಾಡುತ್ತೇವೆ  ಎಂದು ತಿಳಿಸಿದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!